Connect with us

    Village Assistant; ಗ್ರಾಮ ಸಹಾಯಕರ ಹುದ್ದೆ | ಅರ್ಜಿ ಆಹ್ವಾನ

    jobs in chitradurga news

    ಮುಖ್ಯ ಸುದ್ದಿ

    Village Assistant; ಗ್ರಾಮ ಸಹಾಯಕರ ಹುದ್ದೆ | ಅರ್ಜಿ ಆಹ್ವಾನ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 27 AUGUST 2024

    ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕಸಬ ಹೋಬಳಿಯ ಹುಚ್ಚವ್ವನಹಳ್ಳಿ, ಹಿರಿಯೂರು ಹಾಗೂ ಜೆ.ಜಿ.ಹಳ್ಳಿ ಹೋಬಳಿಯ ಕಾಟನಾಯಕನಹಳ್ಳಿ ಕಂದಾಯ ವೃತ್ತಗಳ ಗ್ರಾಮ ಸಹಾಯಕರ(Village Assistant) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

    ಕ್ಲಿಕ್ ಮಾಡಿ ಓದಿ: Murugha matha: ತ್ರಿವಿಧ ದಾಸೋಹಿ, ಪ್ರಸಾದ ನಿಲಯಗಳ ರೂವಾರಿ ಜಯದೇವ ಶ್ರೀ | 150ನೇ ಜಯಂತ್ಯುತ್ಸವದ ವಿಶೇಷ ಲೇಖನ

    ಗ್ರಾಮ ಸಹಾಯಕ ಹುದ್ದೆಯು ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗದಿಯಾಗುವಂತಹ ಗೌರವಧನ ಪಾವತಿಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ನೇಮಕಾತಿಗೆ ಕ್ರಮವಹಿಸಲಾಗುವುದು.

    ಅರ್ಹತೆಗಳು:

    ನಿಗದಿತ ನಮೂನೆ-1ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕೆ 25 ವರ್ಷಗಳು ಪೂರ್ಣಗೊಂಡಿರಬೇಕು. ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸುವುದು. ಸಾಮಾನ್ಯ ಕಂಪ್ಯೂಟರ್ ಸಾಕ್ಷರತೆಯ ತರಬೇತಿ ಪಡೆದಿರುವ ಕುರಿತು ಪ್ರಮಾಣ ಪತ್ರ ಲಗತ್ತಿಸುವುದು.

    ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ ದಾಖಲೆ ಲಗತ್ತಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೊದಲನೇ ಆದ್ಯತೆ ನೀಡಲಾಗುವುದು. ಕ್ರಿಮಿನಲ್ ಮೊಕದ್ದಮೆ ಹಿನ್ನಲೆಯುಳ್ಳವರಾಗಿರಬಾರದು. ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳ ನಿವಾಸಿಯಾಗಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಹಶೀಲ್ದಾರ್ ಕಾರ್ಯಾಲಯ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top