CHITRADURGA NEWS | 08 October 2026
ಚಿತ್ರದುರ್ಗ: ಚಿತ್ರದುರ್ಗ ಅಂಚೆ ವಿಭಾಗೀಯ ಡಾಕ್ ಅದಾಲತನ್ನು ಇದೇ ಅಕ್ಟೋಬರ್ 09ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಕೋಟೆ ರಸ್ತೆಯ ಕಾಮನಬಾವಿ ಬಡಾವಣೆಯ ಫಿಲ್ಟರ್ ಹೌಸ್ ಹತ್ತಿರದ ಚಿತ್ರದುರ್ಗ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಸಲಾಗುವುದು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
ಸಾರ್ವಜನಿಕರು ಮತ್ತು ಅಂಚೆ ಗ್ರಾಹಕರು ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರುಗಳನ್ನು ಮತ್ತು ಸಲಹೆಗಳನ್ನು ಅಕ್ಟೋಬರ್ 09ರಂದು ಬೆಳಿಗ್ಗೆ 11 ಗಂಟೆಯವರೆಗೆ ಅಥವಾ ಅದಕ್ಕಿಂತ ಮುಂಚಿತವಾಗಿ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಫಿಲ್ಟರ್ ಹೌಸ್ ಹತ್ತಿರ, ಕಾಮನ ಬಾವಿ ಬಡಾವಣೆ, ಚಿತ್ರದುರ್ಗ-577501 ಇವರಿಗೆ ಮುಂದಿನ ಕ್ರಮಕ್ಕಾಗಿ ತಲಪುವಂತೆ ಕಳುಹಿಸಬೇಕು ಎಂದು ಚಿತ್ರದುರ್ಗ ವಿಭಾಗದ ಅಂಚೆ ಅಧೀಕ್ಷಕರಾದ ಕೆ.ಆರ್.ಉಷಾ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

