
CHITRADURGA NEWS | 07 AUGUST 2024
ಚಿತ್ರದುರ್ಗ: ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ಬೆಸ್ಕಾಂ ವ್ಯಾಪ್ತಿಯ ಪಂಡರಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ಏಳು ದಿನ ವಿದ್ಯುತ್ ವ್ಯತ್ಯಯವಾಗಲಿದೆ.
ಜಾನುಕೊಂಡ ಗ್ರಾಮದಲ್ಲಿರುವ ಎಲ್‌ಟಿ ಮಾರ್ಗದ 2/4 ಎ,ಸಿಎಸ್‌ಆರ್ ವಾಹಕ ತೆಗೆದು ರ‍್ಯಾಬಿಟ್ ವಾಹಕ ಅಳವಡಿಸುವ ಕಾಮಗಾರಿ ಆಗಸ್ಟ್ 8 ರಿಂದ ಪ್ರಾರಂಭವಾಗಲಿದೆ. ಈ ಕಾರಣಕ್ಕೆ ಆಗಸ್ಟ್ 8 ರಿಂದ 14ರವರೆಗೆ ಸೊಲ್ಲಾಪುರ ಎನ್‌ಜೆವೈ 11ಕೆ.ವಿ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನು ಓದಿ: ಮತ್ತೆ ಬಂದವು ಕರಡಿ | ಶುರುವಾಯಿತು ಆತಂಕ

ಜಾನುಕೊಂಡ, ಮಾಳಪ್ಪನಹಟ್ಟಿ, ಸೋಲ್ಲಾಪುರ, ಸಿದ್ದಾಪುರ, ಜಾಲಿಕಟ್ಟೆ, ಇದಾಯತ್‌ಪುರ, ಮಾನಂಗಿ, ಕಳ್ಳಿಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಏಳು ದಿನ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
