ಚಿತ್ರದುರ್ಗನ್ಯೂಸ್.ಕಾಂ
ಇನ್ನೂ ಒಂದೆರಡು ಗಂಟೆಯಲ್ಲಿ ಪವರ್ ಕಟ್ ಆಗಲಿದೆ. ಪುನಃ ವಿದ್ಯುತ್ ಬರುವುದು ಸಂಜೆ ಬಳಿಕವೇ. ತುರ್ತು ಕಾರ್ಯಗಳಿದ್ದರೆ ಬೇಗ ಪೂರ್ಣಗೊಳಿಸಿಕೊಳ್ಳಿ. ಈ ಸಮಸ್ಯೆ ಆಗುತ್ತಿರುವುದು ಹೊಸದುರ್ಗ ತಾಲ್ಲೂಕಿನ ಮಾಡದಕೆರೆ ಹೋಬಳಿಯ ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ.
ಇದನ್ನೂ ಓದಿ: ದೇವಸ್ಥಾನದ ಗಂಟೆ ಬಾರಿಸುವಾಗ ಹಲ್ಲೆ; ಹಾರಿತು ಪ್ರಾಣಪಕ್ಷಿ; ಕಾರಣವಾಯ್ತು ₹ 150 ಸಾಲ
ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಭರಮಗಿರಿ 66/11 ಕೆ.ವಿ. ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ತಾಲ್ಲೂಕಿನ ಮಾಡದಕೆರೆ ಹೋಬಳಿಯ ಲಕ್ಕಿಹಳ್ಳಿ ಪಂಚಾಯಿತಿ ಎಲ್ಲ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೊಸದುರ್ಗದ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
