
CHITRADURGA NEWS | 30 JANUARY 2024
ಹಿರಿಯೂರು: ಹಿರಿಯೂರಿನ 66/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜನವರಿ 30 ರಂದು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಎಲ್ಲಾ 11 ಕೆವಿ ಪ್ರಸರಣಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ: ನಾಲ್ಕು ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್‍ಗೆ ಕೆ.ಎಸ್.ನವೀನ್ ಉಸ್ತುವಾರಿ
ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹಿರಿಯೂರು ನಗರ, ಗ್ರಾಮೀಣ ಕೈಗಾರಿಕಾ ಪ್ರದೇಶಗಳಾದ ಅಕ್ಷಯ ಫುಡ್ ಪಾರ್ಕ್, ಹಬೀಬ್ ಸ್ವಾಲೆಂಟ್, ಪಿಜಿಸಿಎಲ್, ವಿವಿಪುರ ಕ್ರಾಸ್, ಲಕ್ಕವ್ವನಹಳ್ಳಿ, ದೊಡ್ಡಘಟ್ಟ, ಸೀಗೆಹಟ್ಟಿ, ಕೂನಿಕೆರೆ, ಬಬ್ಬೂರು ತೋಟಗಾರಿಕೆ ವಿಶ್ವವಿದ್ಯಾಲಯ, ಆದಿವಾಲ, ಪಟ್ರೆಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ಗ್ರಾಹಕರು, ರೈತರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಪೀರ್‍ಸಾಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

