CHITRADURGA NEWS | 30 APRIL 2024
ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ ಹಾಲಿ ಇರುವ 66 ಕೆವಿ ಡಿ.ಸಿ ಲೈನ್‍ನಿಂದ ಮಲ್ಟಿ ಸಕ್ರ್ಯೂಟ್ ಟವರ್ ನಿರ್ಮಾಣ ಮಾಡಲು 66/11 ಕೆವಿ ಪಂಡರಹಳ್ಳಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಮೇ 01 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಮಾರಿ ಕಣಿವೆ ಶ್ರೀ ಕಣಿವೆ ಮಾರಮ್ಮ ದೇವಿ ಜಾತ್ರೆ | ಮೇ.10 ರಂದು ಬ್ರಹ್ಮ ರಥೋತ್ಸವ
ವಿದ್ಯುತ್ ಅಡಚಣೆಯಾಗುವ ಮಾರ್ಗಗಳು:
ಅನ್ನೇಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೊಡಬನಾಳ್, ಸೊಂಡೆಕೊಳ, ಸಿಂಗಾಪುರ, ಕಕ್ಕೇಹರವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
