CHITRADURGA NEWS | 15 JULY 2026
ಚಿತ್ರದುರ್ಗ: ಅಧಿಕಾರ ಶಾಶ್ವತವಲ್ಲ, ಮಾಡಿದ ಉತ್ತಮ ಕೆಲಸಗಳು ಮಾತ್ರ ಶಾಶ್ವತವಾಗಿ ಉಳಿಯುತ್ತದೆ. ಇದೇ ನನ್ನ ರಾಜಕೀಯ ಸಿದ್ಧಾಂತ. ಅಧಿಕಾರವನ್ನು ಪ್ರತಿಷ್ಠೆಯ ಬದಲು ಜನಸೇವೆಗೆ ಬಳಸಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ತಾಲೂಕಿನ ಕಳ್ಳಿಹಟ್ಟಿ ಗೊಲ್ಲರಹಟ್ಟಿ, ಬರಗೇರಮ್ಮ ದೇವಸ್ಥಾನ, ಚೋಳಗುಡ್ಡ ವ್ಯಾಪ್ತಿಗಳಲ್ಲಿ ಮಂಗಳವಾರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಸುಮಾರು 85 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕ್ಷೇತ್ರದ ಜನರು ತಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಚ್ಯುತಿ ಬರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಯಾವುದೇ ರೀತಿಯ ಕಪ್ಪು ಚುಕ್ಕಿ ಇಲ್ಲದ ಆಡಳಿತದ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುತ್ತಿದ್ದೇನೆ ಎಂದು ಹೇಳಿದರು.
ಅಧಿಕಾರ ಎಷ್ಟೇ ದೊಡ್ಡದಾಗಿದ್ದರೂ ಅದು ಶಾಶ್ವತವಲ್ಲ. ಆದರೆ, ಜನರಿಗೆ ಅನುಕೂಲವಾಗುವ ರಸ್ತೆ, ಶಾಲೆ, ಕುಡಿಯುವ ನೀರಿನ ಯೋಜನೆ, ಸಮುದಾಯ ಭವನ, ದೇವಸ್ಥಾನಗಳ ಅಭಿವೃದ್ಧಿ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳು ಹಲವು ವರ್ಷಗಳವರೆಗೆ ಜನರ ಮನದಲ್ಲಿ ಉಳಿಯುತ್ತವೆ ಎಂದರು.
ಇದನ್ನೂ ಓದಿ: KPSC, KEA ಪರೀಕ್ಷೆಗಳಿಗೆ ತರಬೇತಿ
ಪ್ರತಿ ಗ್ರಾಮಕ್ಕೂ ಅಗತ್ಯ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಿ.ಸಿ.ರಸ್ತೆ, ಹೈಮಾಸ್ಟ್ ಹಾಗೂ ಎಲ್‌ಇಡಿ ಬೀದಿ ದೀಪಗಳು, ಚರಂಡಿ ಕಾಮಗಾರಿಗಳು, ಕುಡಿಯುವ ನೀರಿನ ಯೋಜನೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರು ನಗರ ಪ್ರದೇಶದ ಸೌಲಭ್ಯಗಳನ್ನು ಪಡೆಯುವಂತಾಗಬೇಕು ಎಂಬುದು ಸರ್ಕಾರ ಮತ್ತು ತಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.
ಹುಲ್ಲೂರು ಕೆರೆಗೆ ನೀರು ತುಂಬಿಸುವ ಯೋಜನೆ ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ ಇದರಿಂದಾಗಿ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಶಾಶ್ವತ ನೀರಿನ ಭದ್ರತೆ ದೊರೆಯಲಿದ್ದು, ಕೃಷಿ ಕ್ಷೇತ್ರದಲ್ಲಿ ಹೊಸ ಆಶಾಕಿರಣ ಮೂಡಲಿದೆ. ಮಳೆ ಕೊರತೆಯಿಂದ ಪ್ರತಿ ವರ್ಷ ಎದುರಾಗುವ ನೀರಿನ ಸಮಸ್ಯೆಗೆ ಈ ಯೋಜನೆ ಪರಿಣಾಮಕಾರಿ ಪರಿಹಾರವಾಗಲಿದೆ.
ಕೆರೆಯಲ್ಲಿ ವರ್ಷಪೂರ್ತಿ ನೀರು ಸಂಗ್ರಹವಾಗುವುದರಿಂದ ಅಂತರ್ಜಲ ಮಟ್ಟ ಗಣನೀಯವಾಗಿ ಹೆಚ್ಚಳವಾಗುತ್ತದೆ. ಇದರಿಂದ ರೈತರ ಕೃಷಿ ಬಾವಿಗಳು ಮತ್ತು ಕೊಳವೆ ಬಾವಿಗಳಿಗೆ ಸಮರ್ಪಕವಾಗಿ ನೀರು ದೊರೆತು, ಬೇಸಿಗೆಯಲ್ಲೂ ತೋಟಗಳಿಗೆ ನೀರು ಸಿಗುತ್ತದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಉಡುವಳ್ಳಿ ನವೋದಯ ವಿದ್ಯಾಲಯ | ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಪ್ರವೇಶಕ್ಕೆ ಅರ್ಜಿ
ಜಿಲ್ಲಾ ಗ್ಯಾರೆಂಟಿ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಶಾಸಕರು ನುಡಿದಂತೆ ನಡೆದಿದ್ದಾರೆ. ಜನರಿಗೆ ಬೇಕಾಗಿರುವ ಮೂಲ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ತಾಪಂ ಇಒ ರವಿಕುಮಾರ್, ಬಿಇಓ ಗಿರಿಜಾ, ಕಾಂಗ್ರೆಸ್ ಮುಖಂಡರಾದ ದೇವರಾಜ್, ನಾಗರಾಜ್, ವಿಕಾಸ್, ಗ್ರಾಮಸ್ಥರಾದ ವೀರಪ್ಪ, ದೋಮಣ್ಣ, ಕುಬೇರಪ್ಪ, ಶಿವಣ್ಣ, ನಿಜಲಿಂಗಪ್ಪ, ರಂಗಸ್ವಾಮಿ ಮತ್ತಿತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

