CHITRADURGA NEWS | 07 MARCH 2026
ಚಿತ್ರದುರ್ಗ: ಚಿತ್ರದುರ್ಗ ನಗರ ಉಪ ವಿಭಾಗ ಕಾರ್ಯ ಮತ್ತು ಪಾಲನಾ ಘಟಕ-4 ರ ವ್ಯಾಪ್ತಿಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಮಾರ್ಚ್ 8ರಂದು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಸಿದ್ದು ಬಜೆಟ್‌ನಲ್ಲಿ ಭದ್ರೆಗೆ ಸಿಕ್ಕ ಅನುದಾನವೆಷ್ಟು ? ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ಕೊಡುಗೆ
ಚಿತ್ರದುರ್ಗ ನಗರ ಉಪ ವಿಭಾಗದ ಘಟಕ-4ರ ಪ್ರದೇಶದ ಪಿ.ಕೆ.ಹಳ್ಳಿ ವ್ಯಾಪ್ತಿಯ ಚಿನ್ಮೂಲಾದ್ರಿ ಶಾಲೆ ಹತ್ತಿರ, ಕನಕ ನಗರ, ಗ್ರಾಮೀಣ ಪೊಲೀಸ್ ಠಾಣೆ ಮತ್ತು ವಸತಿಗೃಹಗಳು, ಬಸವೇಶ್ವರ ನಗರ, ಬಾಪೂಜಿ ನಗರ, ಏಳುಕೋಟಿ ಲೇಔಟ್, ಈರುಳ್ಳಿ ಬಡಾವಣೆ, ಮೇದೇಹಳ್ಳಿ, ಕೋಡಯ್ಯನಹಟ್ಟಿ, ತಮಟಕಲ್ಲು ಗ್ರಾಮಗಳಿಗೆ ಹೊಂದಿಕೊಂಡಂತಹ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ತಿಮ್ಮಣ್ಣ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
