CHITRADURGA NEWS | 25 MAY 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಪ್ರಮುಖ ಬಡಾವಣೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 26ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುಚೇತ ನೇಮಕ
ಚಂದ್ರವಳ್ಳಿ ಮಾರ್ಗದಲ್ಲಿ ಬರುವ ಧವಳಗಿರಿ ಬಡಾವಣೆ, ಚೌಡೇಶ್ವರಿ ಲೇಔಟ್, ಬುರುಜನಹಟ್ಟಿ, ಹೊಳಲ್ಕೆರೆ ರಸ್ತೆ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಲೈನ್‍ಗಳಿಗೆ ತಗಲುವ ಮರ ಗಿಡಗಳ ಕೊಂಬೆಗಳನ್ನು ಕತ್ತರಿಸಲು ಮತ್ತು ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ.
ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರು ವಿದ್ಯುತ್ ನಿಲುಗಡೆ ಸಮಯದಲ್ಲಿ ಸಹಕರಿಸಬೇಕು ಎಂದು ಬೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
