
CHITRADURGA NEWS | 28 NOVEMBER 2025
ಚಿತ್ರದುರ್ಗ: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಹರಿಯಬ್ಬೆ ಮತ್ತು ಪಿ.ಡಿ.ಕೋಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ.28ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹರಿಯಬ್ಬೆ ಮತ್ತು ಪಿ.ಡಿ.ಕೋಟೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ವಿದ್ಯುತ್ ವಿತರಣಾ ಕೇಂದ್ರದ ಎಲ್ಲಾ ಕೆ.ವಿ ಮಾರ್ಗಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಇದನ್ನೂ ಓದಿ: 2 ತಿಂಗಳಿನಲ್ಲಿ ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು | ಶಾಸಕ ಟಿ.ರಘುಮೂರ್ತಿ
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಹರಿಯಬ್ಬೆ, ಧರ್ಮಪುರ, ಶ್ರವಣಗೆರೆ, ಬೆನಕನಹಳ್ಳಿ, ಸಕ್ಕರ, ಕೃಷ್ಣಪುರ, ಸೂಗೂರು, ಬುರುಡುಕುಂಟೆ, ಚಿಲ್ಲಹಳ್ಳಿ, ಈಶ್ವರಗೆರೆ, ಹೂವಿನಹೊಳೆ, ಅಬ್ಬಿನಹೊಳೆ, ಕಣಜನಹಳ್ಳಿ, ಬೇತೂರು, ಬೇತೂರು ಪಾಳ್ಯ, ವಿ.ಕೆ.ಗುಡ್ಡ, ಪಿ.ಡಿ.ಕೋಟೆ, ಖಂಡೇನಹಳ್ಳಿ, ಹಲಗಲದ್ದಿ, ಮದ್ದಿಹಳ್ಳಿ, ಹೊಸಕೆರೆ, ಅರಳಿಕರೆ, ಬಿ.ಕೆ.ಹಟ್ಟಿ ಹಾಗೂ ಸುತ್ತ ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕಾಗಿ ಬೆಸ್ಕಾಂ ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
