CHITRADURGA NEWS | 21 MAY 2026
ಚಿತ್ರದುರ್ಗ: ಚಿತ್ರದುರ್ಗ ನಗರ ಉಪವಿಭಾಗ ಘಟಕ-1 ವ್ಯಾಪ್ತಿಯಲ್ಲಿ ಬರುವ ಎಫ್-10 ಜಿಲ್ಲಾ ಪಂಚಾಯತ್ ಮಾರ್ಗದಲ್ಲಿ ಇರುವ 11 ಕೆ.ವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಈ ಮಾರ್ಗದ ಕೆಲವು ಪ್ರದೇಶಗಳಲ್ಲಿ ಮೇ 22ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?
ಎಫ್-10 ಮಾರ್ಗದ ಐಯುಡಿಪಿ ಲೇಔಟ್-11ನೇ ಕ್ರಾಸ್, ಗಾಂಧಿ ನಗರ, ಕಂದಾಯಗಿರಿ ನಗರ, ರಾಜೇಂದ್ರ ನಗರ, ಸಾದಿಕ್ ನಗರ, ಸೂರ್ಯಪುತ್ರ ಸರ್ಕಲ್, ಕಣುಮಪ್ಪ ಬಡಾವಣೆ, ಜೋಗಿಮಟ್ಟಿ ರಸ್ತೆ-4,5,6ನೇ ಕ್ರಾಸ್, ಜೆ.ಪಿ.ನಗರ, ಸ್ವಾಮಿ ವಿವೇಕಾನಂದ ನಗರ, ಟೀಚರ್ಸ್ ಕಾಲೋನಿ, ಬುದ್ಧ ನಗರ ಸ್ಟೇಡಿಯಂ ಸುತ್ತಮುತ್ತ, ಪ್ರಶಾಂತ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
