CHITRADURGA NEWS | 22 APRIL 2025
ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿರುವ 12.5 ಎಂ.ವಿ.ಎ ಪರಿವರ್ತಕದ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಇದೇ ಏ.23ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎನ್.ಜೆ.ವೈ ಮತ್ತು ಐ.ಪಿ. ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
Also Read: 60 ಸಾವಿರದ ಗಡಿ ದಾಟಿದ ಅಡಿಕೆ ರೇಟ್

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು:
66/11 ಕೆವಿ ಭರಮಸಾಗರ ವಿವಿ ಕೇಂದ್ರದಿಂದ ಸರಬರಾಜಾಗುವ 11ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಎಫ್-4 ಕೊಳಹಾಳ್ ಎನ್.ಜೆ.ವೈ ಮತ್ತು ಎಫ್-10 ಅಡವಿಗೊಲ್ಲರಹಳ್ಳಿ ಎನ್.ಜೆ.ವೈ ಮಾರ್ಗಗಳು, ಎಫ್-1 ಹೆಗ್ಗೆರೆ, ಎಫ್-2 ಎಮ್ಮೆಹಟ್ಟಿ, ಎಫ್-3 ನಲ್ಲಿಕಟ್ಟಿ ಮತ್ತು ಎಫ್-9 ಬಹದ್ದೂರಗಟ್ಟ ಐ.ಪಿ. ಮಾರ್ಗಗಳು.
ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳು:
66/11 ಕೆವಿ ಭರಮಸಾಗರ ವ್ಯಾಪ್ತಿಯ ಕೊಳಹಾಳ್, ಎಮ್ಮೆಹಟ್ಟಿ, ಚಿಕ್ಕಬೆನ್ನೂರು, ಬಸವನಶಿವನಕೆರೆ, ಬೇಡರಶಿವನಕೆರೆ, ಹಂಪನೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Also Read: ಹಿರಿಯ ವಕೀಲ ವೈ.ಆರ್.ಸದಾಶಿವರೆಡ್ಡಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
