
CHITRADURGA NEWS | 28 MAY 2024
ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಬೃಹತ್ ಕಾಮಗಾರಿ ಘಟಕದ ವತಿಯಿಂದ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ ಹಾಲಿ ಇರುವ 66 ಕೆವಿ ಡಿ.ಸಿ ಲೈನ್‍ನಿಂದ ಮಲ್ಟಿ ಸಕ್ರ್ಯೂಟ್ ಟವರ್ ನಿರ್ಮಾಣ ಮಾಡಲು,
ಇದನ್ನೂ ಓದಿ: ಡಿವೈಡರ್‍ಗೆ ಅಪ್ಪಳಿಸಿ ಕಾರು ಪಲ್ಟಿ | ಸ್ಥಳದಲ್ಲೇ ಇಬ್ಬರ ದುರ್ಮರಣ

66/11 ಕೆ.ವಿ ಪಂಡರಹಳ್ಳಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಇಂದು ಮೇ.30ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ನನ್ನ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ | ಅವರು ಬಂದು ಕಟ್ ಮಾಡ್ತಾರಾ | ಮಧು ಬಂಗಾರಪ್ಪ ಗರಂ
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಅನ್ನೇಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೋಡಬನಾಳು, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಮಹದೇವನಕಟ್ಟೆ, ಸಿಂಗಾಪುರ, ಕಕ್ಕೇಹರವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
