
CHITRADURGA NEWS | 29 MAY 2026
ಚಿತ್ರದುರ್ಗ: ಚಿತ್ರದುರ್ಗ ನಗರ ಉಪವಿಭಾಗ ಕಾರ್ಯ ಮತ್ತು ಪಾಲನಾ ಘಟಕ-3ರ ವ್ಯಾಪ್ತಿಯಲ್ಲಿನ ಚಿತ್ರದುರ್ಗ 220/66/11 ಕೆ.ವಿ ಎಸ್.ಆರ್.ಎಸ್‍ನಿಂದ ವಿದ್ಯುತ್ ಪೂರೈಕೆಯಾಗುವ ಎಫ್-1 ಕಾಪರ್‍ಮೈನ್ಸ್ ಮಾರ್ಗದಲ್ಲಿ ನಿರ್ವಹಣಾ ಕೆಲಸ ಇರುವುದರಿಂದ ಇದೇ ಮೇ 30ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: DCC ಬ್ಯಾಂಕ್ ಅಧ್ಯಕ್ಷರಾಗಿ ಶಾಸಕ ಟಿ.ರಘುಮೂರ್ತಿ ಅವಿರೋಧ ಆಯ್ಕೆ
ಚಿತ್ರದುರ್ಗ ನಗರ ಉಪ ವಿಭಾಗ ಘಟಕ-3ರ ಪ್ರದೇಶದ ವ್ಯಾಪ್ತಿಯ ಕುಂಚಿಗನಹಾಳ್, ಡಿ.ಎಸ್.ಹಳ್ಳಿ, ಎಣ್ಣಿಗೆರೆ, ಕ್ಯಾದಿಗೆರೆ, ಓರಗುಂಟನಮಾಳಿಗೆ, ಕಸವನಹಳ್ಳಿ, ಇಂಗಳದಾಳ್, ಕುರುಮರಡಿಕೆರೆ, ಕೆನ್ನೆಡಲು, ಬಾಪೂಜಿ ಕಾಲೋನಿ ಗ್ರಾಮಗಳಿಗೆ ಹೊಂದಿಕೊಂಡಂತಹ ಪ್ರದೇಶಗಳಲ್ಲಿ ಗ್ರಾಮಗಳ ವಿದ್ಯುತ್ ಹಾಗೂ ಐ.ಪಿ. ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

