CHITRADURGA NEWS | 25 SEPTEMBER 2026
ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ವಿಭಾಗ ವ್ಯಾಪ್ತಿಯ 220/66/11 ಕೆವಿ ಹಾಗೂ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಎಲ್ಲಾ ಎನ್‍ಜೆವೈ ಮತ್ತು ಕೃಷಿ 11 ಕೆವಿ ಮಾರ್ಗಗಳಲ್ಲಿ ಇದೇ ಸೆಪ್ಟೆಂಬರ್ 26ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಈ ಅವಧಿಯಲ್ಲಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೇಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾಡನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೊಡಬನಾಳು, ತೇಕಲವಟ್ಟಿ, ಐಮಂಗಲ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

