
CHITRADURGA NEWS | 24 SEPTEMBER 2025
ಹಿರಿಯೂರು: ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹರಿಯಬ್ಬೆ ಹಾಗೂ ಪಿ.ಡಿ. ಕೋಟೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಹಿನ್ನಲೆಯಲ್ಲಿ ಸದರಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸೆ.25ರ ಬೆಳಿಗ್ಗೆ 10 ರಿಂದ ಸಂಜೆ 05 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಆಡಚಣೆಯಾಗುವ ಪ್ರದೇಶಗಳು:
ಹರಿಯಬ್ಬೆ, ಧರ್ಮಪುರ, ಶ್ರವಣಗೆರೆ, ಬೆನಕನಹಳ್ಳಿ, ಸಕ್ಕರ, ಕೃಷ್ಣಪುರ, ಸೂಗುರು, ಬುರುಡುಕುಂಟೆ, ಚಿಲ್ಲಹಳ್ಳಿ, ಈಶ್ವರಗೆರೆ, ಹೂವಿನಹೊಳೆ, ಅಬ್ಬಿನಹೊಳೆ, ಕಣಜನಹಳ್ಳಿ, ಬೇತೂರು, ಬೇತೂರು ಪಾಳ್ಯ, ವಿ.ಕೆ.ಗುಡ್ಡ, ಪಿ.ಡಿ.ಕೋಟೆ, ಖಂಡೆನಹಳ್ಳಿ, ಹಲಗಲದ್ಧಿ, ಮದ್ದಿಹಳ್ಳಿ, ಹೊಸಕೆರೆ, ಅರಳಿಕೆರೆ, ಬಿ.ಕೆ.ಹಟ್ಟಿ, ಹಾಗೂ ಸುತ್ತ ಮುತ್ತಲಿನ ಗ್ರಾಮದದಲ್ಲಿ ವಿದ್ಯುತ್ ಆಡಚಣೆಯಾಗಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಗ್ರಾಹಕರು, ರೈತರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
