
CHITRADURGA NEWS | 17 JULY 2025
ಚಿತ್ರದುರ್ಗ: ಚಿತ್ರದುರ್ಗ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ 220/66/11 ಕೆವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಇದೇ ಜುಲೈ 18ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು :
ಕಾಪರ್ ಮೈನ್ಸ್, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಅಡಿಕೆ ವ್ಯಾಪಾರಿ ದರೋಡೆಗೆ ಸ್ಕೆಚ್ | ಮೂವರ ಬಂಧನ, ಸಿರಿಗೆರೆ, ಭರಮಸಾಗರ ಪೊಲೀಸರ ಕಾರ್ಯಚರಣೆ
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
