
ಚಿತ್ರದುರ್ಗ ನ್ಯೂಸ್.ಕಾಂ
ತ್ರೈಮಾಸಿಕ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಮೊಳಕಾಲ್ಮುರು ತಾಲ್ಲೂಕಿನಲ್ಲಿ ಡಿ.27 ರಂದು ವಿದ್ಯುತ್ ವ್ಯತ್ಯಯವಾಗಲಿದೆ.
ಮೊಳಕಾಲ್ಮುರು ಪಟ್ಟಣ ಸೇರಿದಂತೆ ಬಿ.ಜಿ.ಕೆರೆ ಮತ್ತು ಹಾನಗಲ್ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ.

ಇದನ್ನೂ ಓದಿ: ಬಂದೇ ಬಿಡ್ತು ಸರ್ಕಾರದ ಮತ್ತೊಂದು ಗ್ಯಾರೆಂಟಿ; ಯುವನಿಧಿಗೆ ಅರ್ಜಿ ಆಹ್ವಾನ
ಈ ನಡುವೆ ಬಿ.ಜಿ.ಕೆರೆ ಒಂದನೇ ಮಾರ್ಗಕ್ಕೆ ಮಧ್ಯರಾತ್ರಿ 12 ಗಂಟೆಯಿಂದ 3 ರವರೆಗೆ, ಬೆಳಿಗ್ಗೆ 6 ರಿಂದ 10 ರವರೆಗೆ, ಎರಡನೇ ಮಾರ್ಗಕ್ಕೆ ರಾತ್ರಿ 3 ಗಂಟೆಯಿಂದ ಬೆಳಿಗ್ಗೆ 6 ರವರೆಗೆ, ಪುನಃ ಸಂಜೆ 6 ರಿಂದ 10 ಗಂಟೆ ವರೆಗೆ ಹಾಗೂ ಹಾನಗಲ್ ವ್ಯಾಪ್ತಿಯಲ್ಲಿ ಮುಂಜಾನೆ 5 ಗಂಟೆಯಿಂದ 10 ಗಂಟೆವರೆಗೆ ಹಾಗೂ ರಾತ್ರಿ 9 ರಿಂದ 12 ಗಂಟೆ ವರೆಗೆ ‘ತ್ರೀಫೇಸ್’ ವಿದ್ಯುತ್ ಸರಬರಾಜುಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಐದು ಗ್ಯಾರೆಂಟಿ ನಿಲ್ಲಿಸಿ, ಕಾಮಗಾರಿ ಬಿಲ್ ಪಾವತಿಸಿ; ಕಟ್ಟಡ ನಿರ್ಮಾಣ ಕಾರ್ಮಿಕರ ಆಗ್ರಹ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
