ಮುಖ್ಯ ಸುದ್ದಿ
MP: ವಿದ್ಯುತ್ ವ್ಯತ್ಯಯ ನಾಳೆಗೆ ಮುಂದೂಡಿಕೆ | ಸಂಸದರ ಸಭೆ ಹಿನ್ನೆಲೆ
CHITRADURGA NEWS | 21 NOVEMBER 2024
ಚಿತ್ರದುರ್ಗ: ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ನ.21 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಚಿತ್ರದುರ್ಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದರು.
ಆದರೆ, ನ.21 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ (MP) ಸಂಸದ ಗೋವಿಂದ ಎಂ. ಕಾರಜೋಳ ಅವರು ಕೇಂದ್ರ ಪುರಸ್ಕøತ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆ (ದಿಶಾ ಮೀಟಿಂಗ್) ಆಯೋಜಿಸಿರುವ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯವನ್ನು ಮುಂದೂಡಲಾಗಿದೆ.
ಇದನ್ನೂ ಓದಿ: ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದಿನಾಂಕ ನಿಗಧಿ
ನ.22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. ಇಂದಿನ ಬದಲು ನಾಳೆ ಕರೆಂಟ್ ಕಟ್ ಮಾಡಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ವಿದ್ಯುತ್ ಅಡಚಣೆಯಾಗಬೇಕಿದ್ದ ಕಾಪರ್ ಮೈನ್ ಏರಿಯಾ, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ನ.22 ರಂದು ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಹಾಡಹಗಲೇ 6 ಲಕ್ಷ ಕದ್ದ ಚಾಲಾಕಿ ಕಳ್ಳರು
ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.