By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    9 hours ago
    ಅರ್ಜಿ ಅಹ್ವಾನ
    ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
    20 hours ago
    ದೀಪ ಬೆಳಗುವ ಮತ್ತು ಪ್ರಮಾಣ ವಚನ ಸ್ವೀಕರಿಸುವ ಜ್ಯೋತಿರ್ಗಮಯ ಸಮಾರಂಭ
    ನರ್ಸಿಂಗ್ ವೃತ್ತಿ ಸಮಾಜ ಸೇವೆಯ ಪ್ರತೀಕ | ಜಿಲ್ಲಾಧಿಕಾರಿ ಎಸ್.ರಮ್ಯಾ
    20 hours ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    1 day ago
    ಹೋಂ ಸ್ಟೇ
    ಚಿತ್ರದುರ್ಗ ಜಿಲ್ಲೆಯ ಹೋಂಸ್ಟೇಗಳ ನೋಂದಣಿ ಕಡ್ಡಾಯ | ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    11 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    20 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    11 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    19 hours ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    20 hours ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    2 days ago
    Stairs in Homes
    ಮನೆಗಳಲ್ಲಿ ಮೆಟ್ಟಿಲುಗಳ ಸಂಖ್ಯೆ ಎಷ್ಟಿರಬೇಕು ಗೊತ್ತಾ? ವಾಸ್ತು ನಿಯಮ ತಿಳಿಯಿರಿ
    2 days ago
    Saffron water
    ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
    3 days ago
Reading: ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ-ಸಚಿವ ಡಿ.ಸುಧಾಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ-ಸಚಿವ ಡಿ.ಸುಧಾಕರ್

News Desk Chitradurga News
Last updated: 10 March 2024 18:41
News Desk Chitradurga News
3 years ago
Share
ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ
ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ
SHARE

CHITRADURGA NEWS | 10 MARCH 2024

ಹಿರಿಯೂರು : ಪಿ.ಆರ್.ಟಿ ಎಂದೇ ಜನಮಾನಸದಲ್ಲಿ ಹೆಸರಾಗಿರುವ ಹಿರಿಯೂರು ತಾಲ್ಲೂಕು ಹರ್ತಿಕೋಟೆ ಗ್ರಾಮದ ಪಿ.ಆರ್.ತಿಪ್ಪೇಸ್ವಾಮಿ ನಿಸ್ವಾರ್ಥದಿಂದ ಸಮಾಜಮುಖಿ ಜೀವನ ನಡೆಸಿದವರು. ಅವರ ಕೊಡುಗೆಗಳನ್ನು ನೆನಪಿಸುವ ಕೆಲಸವನ್ನು ಪಿ.ಆರ್.ಟಿ ಪ್ರತಿಷ್ಠಾನ ಮಾಡಬೇಕು. ಈ ಕಾರ್ಯಕ್ಕೆ ಒಂದು ವಾರದಲ್ಲಿಯೇ ರೂ.10ಲಕ್ಷ ಗೌರವ ಧನ ನೀಡುವುದಾಗಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.

ಇದನ್ನೂ ಓದಿ: ವಾಗ್ವಾದಕ್ಕೆ ಕಾರಣವಾದ ಸಂವಾದ | ಮಾದಾರ ಚನ್ನಯ್ಯ ಗುರುಪೀಠ ಕುರಿತ ಚರ್ಚೆಗೆ ತೀವ್ರ ವಿರೋಧ

ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ, ಹಿರಿಯೂರು ತಾಲ್ಲೂಕು ಹರ್ತಿಕೋಟೆಯಲ್ಲಿ ಭಾನುವಾರ ಆಯೋಜಿಸಿದ್ದ ಪಿ.ಆರ್. ತಿಪ್ಪೇಸ್ವಾಮಿಯವರ ನವೀಕೃತ ಸ್ಮಾರಕ ಲೋಕಾರ್ಪಣೆ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ.

ನವೀಕೃತ ಸ್ಮಾರಕ ನಿರ್ಮಾಣ ಕಾರ್ಯ ನಾಡಿಗೆ ಮಾದರಿಯಾಗಿದೆ. ಮೈಸೂರು ವಿಶ್ವ ವಿದ್ಯಾಲಯದಲ್ಲಿ ಪಿ.ಆರ್.ತಿಪ್ಪೇಸ್ವಾಮಿ ಕೆಲಸ ಮಾಡುತ್ತಿದ್ದಾಗ, ಜಿಲ್ಲೆಯ ಹಿಂದುಳಿದ ಭಾಗಗಳಿಂದ ವಿದ್ಯಾಭ್ಯಾಸ ಹರಿಸಿ ಮೈಸೂರಿಗೆ ಬರುವ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದರು. ಅವರ ನಿಸ್ವಾರ್ಥವಾದ ಪ್ರೇಮ, ಕಾಳಜಿಯಿಂದ ಬಹಳಷ್ಟು ಜನ ಉನ್ನತ ವಿದ್ಯಾಭ್ಯಾಸ ಗಳಿಸಿ ಜೀವನಮಟ್ಟ ಸುಧಾರಿಸಿಕೊಂಡಿದ್ದಾರೆ. ಕ್ರೀಯಾಶೀಲ ವ್ಯಕ್ತಿತ್ವದ ಪಿ.ಆರ್.ಟಿ ಬದುಕಿನ ಉದ್ದಕ್ಕೂ ಸಮಾಜ ಕಟ್ಟುವ ಕೆಲಸ ಮಾಡಿದರು ಎಂದು ಸಚಿವ.ಡಿ.ಸುಧಾಕರ್ ಸ್ಮರಿಸಿದರು.

ಇದನ್ನೂ ಓದಿ: ಶಿವರಾತ್ರಿ ಪ್ರಯುಕ್ತ ಕಬೀರಾನಂದಾ ಮಠದಲ್ಲಿ ವಿಶಿಷ್ಟ ಕೌದಿ ಪೂಜೆ

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಾತನಾಡಿ, ದೇಶದ ನೂರಾರು ವಿದ್ಯಾರ್ಥಿಗ, ಕಲಾವಿದರ ಬದುಕಿಗೆ ಪಿ.ಆರ್.ಟಿ ದಾರಿ ದೀಪವಾಗಿದ್ದಾರೆ. ಪಿ.ಆರ್.ಟಿ ಅವರ ಸಾಹಿತ್ಯ ಕೃಷಿ ವಿಭಿನ್ನವಾದದು. ಎಂದಿಗೂ ಅವರು ತಮ್ಮ ಸಾಹಿತ್ಯವನ್ನು ವ್ಯಾಪಾರೀಕರಣ ಮಾಡಲಿಲ್ಲ. ತಾವು ಬರೆದ ಕೃತಿಗಳನ್ನು ಇತರರಿಗೆ ಮಾರಾಟ ಮಾಡದೆ ಸ್ನೇಹಿತರಿಗೆ ಕೊಡುಗೆಯಾಗಿ ಕೊಟ್ಟಿದ್ದಾರೆ.

ಆಸೆ ಆಮಿಷಕ್ಕೆ ಬಲಿಯಾಗದೆ, ಸ್ವಾರ್ಥ ರಹಿತ ಬದುಕು ಜೀವಿಸಿದ ಪಿ.ಆರ್.ಟಿ ನಮಗೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಬೆಂಗಳೂರು ಮಹಾನಗರದಲ್ಲಿನ ಒಂದು ವೃತ್ತಕ್ಕೆ ಹಾಗೂ ಮೈಸೂರಿನ ವಿಶ್ವವಿದ್ಯಾಲಯದ ವಸ್ತು ಸಂಗ್ರಹಾಲಯಕ್ಕೆ ಇವರ ಹೆಸರನ್ನು ನಾಮಕರಣ ಮಾಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ. ಈ ವಿಚಾರದಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳುವ ಭರವಸೆಯನ್ನು ಕೆ.ವಿ.ಪ್ರಭಾಕರ್ ವ್ಯಕ್ತಪಡಿಸಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ | ಸಿದ್ಧತೆಗಳ ಬಗ್ಗೆ ನಿಗಾ ಇರಿಸಲು ಡಿಸಿ ಸೂಚನೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಕಾಗಿನೆಲೆ ಕನಕ ಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮೀಜಿ, ಸಾಮಾನ್ಯ ವ್ಯಕ್ತಿಯ ಹುಟ್ಟು ಹಾಗೂ ಜೀವನ ಚಾರಿತ್ರಿಕವಾಗಬೇಕಾದರೆ ಅವರ ಜೀವನ ಸಾಧನೆ ಜಗತ್ತಿಗೆ ಮಾದರಿಯಾಗಿರಬೇಕು. ಅಂತಹ ಚಾರಿತ್ರಿಕ ವ್ಯಕ್ತಿತ್ವ ಪಿ.ಆರ್.ತಿಪ್ಪೇಸ್ವಾಮಿ ಅವರದ್ದಾಗಿದೆ. ವೈಯಕ್ತಿಕ ಜೀವನ ಬದಿಗೊತ್ತಿ, ಮದುವೆಯೂ ಅಗದೇ, ಪಿ.ಆರ್.ಟಿ ಅವರು ಸಮಾಜವೇ ತನ್ನ ಕುಟುಂಬ ಎಂದು ಭಾವಿಸಿ ಬದುಕಿದವರು.

ಅವರ ಸಾಧನೆ ಅಪಾರವಾದದ್ದು ಪಿ.ಆರ್.ಟಿ.ಚಿತ್ರಕಲೆಯೇ ಜೀವನದ ಉಸಿರನ್ನಾಗಿಸಿ ಸ್ವೀಕರಿಸಿದವರು. ಎಲ್ಲ ವರ್ಗದ ಮಕ್ಕಳಿಗೆ ವಿದ್ಯಾಧಾನ, ಅನ್ನದಾನಮಾಡಿ ಅವರ ಬದುಕಿಗೆ ಆಸರೆಯಾದರು. ಅವರಿಂದ ಸಹಾಯ ಪಡೆದ ಎಲ್ಲರ ಮನಸ್ಸಲ್ಲಿ ಪಿ.ಆರ್.ಟಿ ಸ್ಥಿರವಾಗಿ ಉಳಿದಿದ್ದಾರೆ. ಪಿಆರ್‍ಟಿ ಪ್ರತಿ ಪ್ರತಿಷ್ಠಾನದ ಸಹಕಾರದಿಂದ ಅವರ ಸ್ಮಾರಕ ನಿರ್ಮಾಣದ ಕೆಲಸ ಆಗಿದೆ. ಇದೇ ಮಾದರಿಯಲ್ಲಿ ಹರ್ತಿಕೋಟೆ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ ಸಹಕರಿಬೇಕು ಎಂದು ನಿರಂಜನಾನಂದ ಪುರಿ ಮಹಾಸ್ವಾಮೀಜಿ ಕೋರಿದರು.

ಇದನ್ನೂ ಓದಿ: ಎಸ್‍ಓಪಿ ರಸಗೊಬ್ಬರ ಜಪ್ತಿ | ಕೃಷಿ ಇಲಾಖೆ ಜಾರಿ ದಳ ಜಾರಿ

ಈ ಸಮಾರಂಭದಲ್ಲಿ ಪಿ.ಆರ್.ಟಿ ಪ್ರತಿಷ್ಠಾನದ ಸಂಚಾಲಕ ಹರ್ತಿಕೋಟೆ ರುದ್ರಣ್ಣ, ಅಧ್ಯಕ್ಷ ರಾಜಶೇಖರ್ ಕದಂಬ, ಗೌರವ ಕಾರ್ಯದರ್ಶಿ ಮಹದೇವ ಶೆಟ್ಟಿ, ಪ್ರಜಾಪ್ರಗತಿ ಪತ್ರಿಕೆ ಸಂಪಾದಕ ಎಸ್ ನಾಗಣ್ಣ, ಗ್ರಾ.ಪಂ.ಅಧ್ಯಕ್ಷ ಪ್ರತಾಪ ಸಿಂಹ, ಉಪಾಧ್ಯಕ್ಷೆ ಮಹೇಶ್ವರಿ ಗೋಡೆ ತಿಪ್ಪೇಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್, ಸ್ಮಾರಕ ಶಿಲ್ಪಿ ನರಸಿಂಹರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನದೊಂದಿಗೆ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:D. SudhakarHiriyurKV PrabhakarMemorialPR TippeswamyPutthaliಕೆ.ವಿ.ಪ್ರಭಾಕರ್ಡಿ.ಸುಧಾಕರ್ಪಿ.ಆರ್. ತಿಪ್ಪೇಸ್ವಾಮಿಪುತ್ಥಳಿಸ್ಮಾರಕಹಿರಿಯೂರು
Share This Article
Facebook Email Print
Previous Article ವಾಗ್ವಾದಕ್ಕೆ ಕಾರಣವಾದ ಸಂವಾದ | ಮಾದಾರ ಚನ್ನಯ್ಯ ಗುರುಪೀಠ ಕುರಿತ ಚರ್ಚೆಗೆ ತೀವ್ರ ವಿರೋಧ | ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಹರಸಾಹಸ
Next Article ಪ್ರೊ.ಅಂಜಿನಪ್ಪ ಪ್ರೊ.ಅಂಜಿನಪ್ಪ ನುಡಿನಮನ | ದಲಿತ ನಾಯಕ ಎಂ.ಜಯಣ್ಣ, ಅಂಜಿನಪ್ಪ ಕುರಿತ ಕೃತಿಗಳು ಬರಬೇಕು
Leave a Comment

Leave a Reply Cancel reply

Your email address will not be published. Required fields are marked *

ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುಖ್ಯ ಸುದ್ದಿ
ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
ಹೊಸದುರ್ಗ
Heart problem
ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
Life Style
ಅರ್ಜಿ ಅಹ್ವಾನ
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up