ಚಿತ್ರದುರ್ಗ ನ್ಯೂಸ್.ಕಾಂ: ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದಿಂದ ಅಕ್ಟೋಬರ್ 29 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ತರಾಸು ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಚಿತ್ರದುರ್ಗ ತಾಲೂಕು ವ್ಯಾಪ್ತಿಯ ಮಾದಿಗ ಸಮಾಜಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಕಿಸಬೇಕು.
2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಅಕ್ಟೋಬರ್ 25 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.
ಅಧ್ಯಕ್ಷರು/ಕಾರ್ಯದರ್ಶಿ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘ ತಾಲ್ಲೂಕು ಶಾಖೆ ಸರಸ್ವತಿ ಪುರಂ ಮೊದಲನೆ ಕ್ರಾಸ್ ಜಂಬೂದ್ವೀಪ, ಚಿತ್ರದುರ್ಗ ಇಲ್ಲಿಗೆ ದಾಖಲೆಗಳನ್ನು ತಲುಪಿಸಲು ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
