CHITRADURGA NEWS | 16 MAY 2026
ಚಿತ್ರದುರ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ.
ಇದನ್ನೂ ಓದಿ: ಹೊಳಲ್ಕೆರೆ ಪುರಸಭೆಯಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಅಹ್ವಾನ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ್ ಬಿ ಖಂಡ್ರೆ ಅವರ ಅನುಮತಿ ಮೇರೆಗೆ ಚಿತ್ರದುರ್ಗ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮಹಾಸಭಾದ ವೆಬ್‍ಸೈಟ್ www.aivlm.org ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅಂಚೆ, ಕೊರಿಯರ್ ಅಥವಾ ಖುದ್ದಾಗಿ ನೀಡುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ, ಕೇವಲ ಆನ್‍ಲೈನ್ ಅರ್ಜಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ. 15 | ಮೆಕ್ಕೆಜೋಳ, ರಾಗಿ ರೇಟ್..
ಜಿಲ್ಲೆಯ ಗ್ರಾಮೀಣ ಭಾಗದ ಮತ್ತು ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳುವಂತೆ ಎಂದು ಚಿತ್ರದುರ್ಗ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ಶಶಿಧರ ಬಾಬು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
