
CHITRADURGA NEWS | 28 NOVEMBER 2025
ಚಿತ್ರದುರ್ಗ: ವಿದ್ಯಾರ್ಥಿಗಳ ನೈಜ ಪ್ರತಿಭೆ ಹೊರ ತೆಗೆಯಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು, ನ್ಯಾಯಯುತವಾಗಿ ವಿದ್ಯಾರ್ಥಿಗಳ ಕೌಶಲಗಳನ್ನು ಗುರುತಿಸಿ ಆಯ್ಕೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಗಿರಿಜಾ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 28 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ನಗರದ ಸಂಪಿಗೆ ಸಿದ್ದೇಶ್ವರ ಶಾಲಾ ಆವರಣದಲ್ಲಿ ನಡೆದ ಚಿತ್ರದುರ್ಗ ಪಶ್ಚಿಮ ಕ್ಲಸ್ಟರ್ನ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಸ್ಥಳೀಯ ಸಲಹಾ ಸಮಿತಿಯ ಸದಸ್ಯ ಕೋಗುಂಡೆ ದ್ಯಾಮಣ್ಣ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಮಕ್ಕಳ ಭವಿಷ್ಯವನ್ನು ಯಾವ ದಿಕ್ಕಿನಡೆ ಕಂಡುಕೊಳ್ಳಬೇಕು ಎಂಬುದನ್ನು ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಸಾಕಾರಗೊಳಿಸುತ್ತವೆ.
ವಿದ್ಯಾರ್ಥಿಗಳು ತಮ್ಮಲ್ಲಿರುವ ಸೂಕ್ತ ಪ್ರತಿಭೆಗಳನ್ನು ಮುಕ್ತವಾಗಿ ಇಂತಹ ವೇದಿಕೆಗಳಲ್ಲಿ ಹಂಚಿಕೊಳ್ಳುವ ಮೂಲಕ ಶಿಕ್ಷಣದ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಅನುಕೂಲ ಮಾಡಿಕೊಳ್ಳಬೇಕು. ಭವಿಷ್ಯದ ಕೌಶಲ್ಯಯುತ ಭಾರತಕ್ಕೆ ಪ್ರತಿಭಾ ಕಾರಂಜಿ ವೇದಿಕೆ ಎಂದು ತಿಳಿಸಿದರು.
ಸಂಪತ್ ಕುಮಾರ್ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದದ್ದು, ಅವಕಾಶಗಳು ಸಿಕ್ಕಾಗ ವಿದ್ಯಾರ್ಥಿಗಳು ಅವುಗಳನ್ನ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಇದನ್ನೂ ಓದಿ: ಹೊಳಲ್ಕೆರೆ | ಗಣಿಬಾಧಿತ ಪ್ರದೇಶಗಳಲ್ಲಿ ವಸತಿ ರಹಿತ ಫಲಾನುಭವಿಗಳ ಆಯ್ಕೆಗೆ ಗ್ರಾಮಸಭೆ
ಪ್ರಸ್ತಾವಿಕವಾಗಿ ಮಾತನಾಡಿದ ಸಮೂಹ ಸಂಪನ್ಮೂಲ ವ್ಯಕ್ತಿ ಅಜಯ್ ಕುಮಾರ್, 32 ಶಾಲೆಗಳಿಂದ ಆಗಮಿಸಿರುವ ಎಲ್ಲ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ 750ಕ್ಕೂ ಮಕ್ಕಳು ಭಾಗವಹಿಸಲಿದ್ದಾರೆ.
ಈ ಎಲ್ಲ ವಿದ್ಯಾರ್ಥಿಗಳು ಶಾಲಾ ಹಂತದಲ್ಲಿ ಗುರುತಿಸಿ ವಿಜೇತರನ್ನು ಇಲ್ಲಿಗೆ ಕರೆತರಲಾಗಿದೆ. ಇಲ್ಲಿ ಆಯ್ಕೆಯಾದ ಮಕ್ಕಳು ರಾಜ್ಯ ಹಂತದಲ್ಲೂ ಆಯ್ಕೆಯಾಗುವಂತಹ ಗುಣಮಟ್ಟ ಇರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ದಾರಿ ತೀರ್ಪುಗಾರರಿಗೆ ಇದೆ.
ಚಿತ್ರದುರ್ಗ ಪಶ್ಚಿಮ ಕ್ಲಸ್ಟರ್ನಲ್ಲಿ 2025 24ನೇ ಸಾಲಿನಲ್ಲಿ ವರ್ಗಾವಣೆ ಮತ್ತು ನಿವೃತ್ತಿ ಹೊಂದಿದ ಶಿಕ್ಷಕರುಗಳಿಗೆ ವೇದಿಕೆಯಲ್ಲಿ ಗೌರವ ಸಮರ್ಪಿಸಲಾಯಿತು.
ಚನ್ನಬಸವೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪಿಗೆ ಶಾಲೆ ಮುಖ್ಯ ಶಿಕ್ಷಕರಾದ ಪ್ರಕಾಶ್ ಸ್ವಾಗತಿಸಿದರು. ಭಾಗ್ಯಲಕ್ಷ್ಮಿ ನಿರೂಪಿಸಿದರು. ದೇವರಾಜ್ ವಂದಿಸಿದರು.
ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ರೋಗಿಯ ಸಂಬಂಧಿಕರು ಸಂದರ್ಶನ ಅವಧಿಯಲ್ಲಿ ಮಾತ್ರ ಭೇಟಿ ನೀಡಿ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ
ಕಾರ್ಯಕ್ರಮದಲ್ಲಿ ಇಸಿಓ ಮಲ್ಲಿಕಾರ್ಜುನ್, ಬಿಆರ್ ಪಿ ಮೈಲಾರಪ್ಪ, ಮುಖ್ಯ ಶಿಕ್ಷಕರಾದ ರುದ್ರಮುನಿ, ರೇಖಾ, ಉಮಾಮಹೇಶ್ವರಿ ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

