
CHITRADURGA NEWS | 07 JULY 2024
ಚಿತ್ರದುರ್ಗ: ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ವತಿಯಿಂದ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳಿಸಿದ ಮುಸ್ಲಿಂ ವಿದ್ಯಾರ್ಥಿಗಳಿಗೆ ತ.ರಾ.ಸು.ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: Dengue; ಆತಂಕ ಸೃಷ್ಟಿಸಿದ ಡೆಂಗ್ಯೂ | ಕೋವಿಡ್ ಮಾದರಿಯಲ್ಲಿ ನಿಯಂತ್ರಣಕ್ಕೆ ಸಜ್ಜು

ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಉದ್ಘಾಟಿಸಿ ಮಾತನಾಡಿ, ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆಯಾಗುತ್ತದೆ,
ನಾಲ್ಕೈದು ವರ್ಷಗಳ ಹಿಂದೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಸಮಸ್ಯೆ ಎದುರಿಸಿ ಅದರ ನಡುವೆಯೇ ಹತ್ತನೆ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ.
ಪ್ರತಿಭಾವಂತ ಮಕ್ಕಳ ಹಿಂದೆ ಸಮಾಜದ ಮುಖಂಡರುಗಳು ಇದ್ದಾರೆನ್ನುವುದಕ್ಕೆ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದೇ ಸಾಕ್ಷಿ. ಮುಸ್ಲಿಂ ಸಮಾಜದ ಹೆಣ್ಣು ಮಕ್ಕಳ ಶಿಕ್ಷಣಕ್ಕೂ ಸಮಾನ ಅವಕಾಶವಿದೆ. ತಂದೆ-ತಾಯಿಗಳು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವುದರ ಜೊತೆಗೆ ಮಕ್ಕಳ ಚಲನವಲನದ ಕಡೆಗೂ ನಿಗಾ ಇಡಬೇಕು ಎಂದರು.
ಇದನ್ನೂ ಓದಿ: ಪಿಸಿಪಿಎನ್‌ಡಿಟಿ ಸಲಹಾ ಸಮಿತಿ ಪುನರ್ ರಚನೆ | ಅಧ್ಯಕ್ಷರಾಗಿ ಡಾ.ಸೌಮ್ಯ ಆಯ್ಕೆ
ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ಮಾತನಾಡಿ, ಮಕ್ಕಳಿಗೆ ಹಣ ಆಸ್ತಿ ಸಂಪಾದಿಸುವ ಬದಲು ಶಿಕ್ಷಣವನ್ನೆ ದೊಡ್ಡ ಸಂಪತ್ತನ್ನಾಗಿ ಮಾಡಬೇಕು. ಶಿಕ್ಷಣದ ಕೊರತೆಯಿರುವವರು ಮಾತ್ರ ವಯಸ್ಸಾದ ತಂದೆ-ತಾಯಿಗಳನ್ನು ಮನೆಯಿಂದ ಹೊರ ಹಾಕುತ್ತಾರೆ.
ಮುಸ್ಲಿಂ ಹೆಣ್ಣು ಮಕ್ಕಳಿಗೂ ಪುರುಷರಂತೆ ಸಮಾನವಾಗಿ ಶಿಕ್ಷಣ ಕೊಡಿಸಬೇಕೆಂದು ಕುರಾನ್‍ನಲ್ಲಿ ಹೇಳಿದೆ. ಮಕ್ಕಳು ಚೆನ್ನಾಗಿ ಓದಿ ಜೀವನದಲ್ಲಿ ದೊಡ್ಡ ಹುದ್ದೆಯನ್ನು ಏರಲಿ ಎನ್ನುವ ಆಸೆ ಪೋಷಕರಿಗೂ ಇರಬೇಕು. ಮಕ್ಕಳು ಹೆಚ್ಚಿನ ಅಂಕಗಳನ್ನು ಪಡೆದು ಗುರು-ಹಿರಿಯರು ಅಪ್ಪ-ಅಮ್ಮನಿಗೆ ಕೀರ್ತಿ ತಂದರೆ ಅದಕ್ಕಿಂತ ದೊಡ್ಡ ಸಂತೋಷ ಮತ್ತೊಂದಿಲ್ಲ.
ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ ಮಾತನಾಡಿದರು.
ಧಾರ್ಮಿಕ ಚಿಂತಕ ಮೌಲಾನಾ ಎಜಾಜುಲ್ಲಾ ಸಾನಿಧ್ಯ ವಹಿಸಿದ್ದರು. ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಎಂ.ಹನೀಫ್ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿ | 31 ರವರೆಗೆ ಅವಧಿ ವಿಸ್ತರಣೆ
ಈ ವೇಳೆ ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಕಾರ್ಯಾಧ್ಯಕ್ಷ ನವೀದ್ ಅಬ್ದುಲ್ಲಾ, ನ್ಯಾಯವಾದಿ ದಿಲ್‍ಶಾದ್ ಉನ್ನಿಸ, ಮುಸ್ಲಿಂ ವಕೀಲರ ಸಂಘದ ಅಧ್ಯಕ್ಷ ಸಮೀವುಲ್ಲಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ. ಸಾಧಿಕ್‍ವುಲ್ಲಾ, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಸೈಯದ್ ವಲಿಖಾದ್ರಿ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
