ಮುಖ್ಯ ಸುದ್ದಿ
ವೀರಶೈವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
CHITRADURGA NEWS | 05 AUGUST 2024
ಚಿತ್ರದುರ್ಗ: ವೀರಶೈವ ಸಮಾಜದ ವತಿಯಿಂದ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿ.ಯು.ಸಿ, ಪದವಿ, ಸ್ವಾತಕೋತ್ತರ ಪದವಿಯಲ್ಲಿ ಡಿಸ್ಟಿಂಕ್ಷನ್ ಪಡೆದ ಪ್ರತಿಭಾನ್ವಿತ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಕ್ಲಿಕ್ ಮಾಡಿ ಓದಿ: SOLAR; ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ | 3 ಕಿಲೋ ವ್ಯಾಟ್ ಸಾಮರ್ಥ್ಯದ ಸೋಲಾರ್ ಅಳವಡಿಕೆ
ಈ ವೇಳೆ ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎನ್.ತಿಪ್ಪೇಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಿಂದಿನ ಪರಿಶ್ರಮವನ್ನು ಮರಿಯಬಾರದು, ಶಿಕ್ಷಣದಿಂದ ಮಾತ್ರ ಪ್ರಗತಿಯನ್ನು ಸಾಧಿಸಲು ಸಾಧ್ಯವಿದೆ. ಮನೆಯಲ್ಲಿ ಬಡತನ ಇದ್ದರೂ ಸಹಾ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಿದ್ದಾರೆ, ಇದನ್ನು ಮರೆಯಬಾರದು ಮುಂದಿನ ದಿನದಲ್ಲಿ ಅವರನ್ನು ಚನ್ನಾಗಿ ನೋಡಿಕೊಳ್ಳಬೇಕಿದೆ ಎಂದರು.
ಮುಂದಿನ ದಿನದಲ್ಲಿ ಲಿಂಗಾಯತ ಸಮುದಾಯದ ಎಲ್ಲಾ ಉಪ ಪಂಗಡಗಳನ್ನು ಸೇರಿಸಿ ಜಿಲ್ಲೆಯಲ್ಲಿನ ವೀರಶೈವ ಪ್ರತಿಭಾವಂತ ಮಕ್ಕಳಿಗೂ ಸಹಾ ಸನ್ಮಾನ ಮಾಡುವ ಕಾರ್ಯವನ್ನು ಮಾಡಬೇಕೆಂದು ನಮ್ಮ ಸಮಾಜದವರು ತೀರ್ಮಾನ ಮಾಡಿದ್ದಾರೆ. ಶೀಘ್ರವಾಗಿ ಕಾರ್ಯ ರೂಪಕ್ಕೆ ತರಲಾಗುವುದು.
ಚಿತ್ರದುರ್ಗದಲ್ಲಿ ನಮ್ಮ ಸಮಾಜದ ಮಕ್ಕಳು ಓದಲು ವಸತಿ ನಿಲಯ ಇಲ್ಲ ಈ ಹಿನ್ನಲೆಯಲ್ಲಿ ನಮ್ಮ ಸಮಾಜದ ವತಿಯಿಂದ ಉತ್ತಮವಾದ ವಿದ್ಯಾರ್ಥಿ ನಿಲಯವನ್ನು ಸ್ಥಾಪನೆ ಮಾಡುವ ಉದ್ದೇಶ ಇದೆ ಎಂದರು.
ಕ್ಲಿಕ್ ಮಾಡಿ ಓದಿ: Hindu Mahaganapathi: ಹಿಂದೂ ಮಹಾಗಣಪತಿ ಉತ್ಸವ ಸಮಿತಿಗೆ ಬಿ.ನಯನ್ ಅಧ್ಯಕ್ಷ
ಚಳ್ಳಕೆರೆಯ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಿ.ವಿ.ರಾಜಣ್ಣ ಉಪನ್ಯಾಸ ನೀಡಿ, ನಮ್ಮ ಪ್ರಗತಿ ನಮ್ಮ ಕೈಯಲಿಯೇ ಇದೆ, ಮುಂದೆ ಬೆಳೆಯುವ ಹುಮ್ಮಸ್ಸು ಛಲ ನಿಮ್ಮಲ್ಲಿ ಇದ್ದಾಗ ಮಾತ್ರ ಬೆಳೆಯಲು ಸಾಧ್ಯವಿದೆ, ನಮ್ಮ ಏಳ್ಗೆಯನ್ನು ನಾವೇ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಗುರಿ, ಛಲ ಅಗತ್ಯವಾಗಿದೆ. ಮಾನವನಾದನು ತನ್ನ ಅಂತರಂಗ ಬಹಿರಂಗವನ್ನು ಅರ್ಥ ಮಾಡಿಕೊಂಡಾಗ ಮಾತ್ರ ಮಾನವನಾಗಿ ಬದುಕಲು ಸಾಧ್ಯವಿದೆ. ನಾವು ಏನಾಗಬೇಕೆಂದು ಅದರ ಬಗ್ಗೆ ಕನಸನ್ನು ಕಾಣಬೇಕು, ಕಂಡ ಕನಸ್ಸನ್ನು ನನಸಾಗುವಂತೆ ಮಾಡಲು ಪರಿಶ್ರಮವನ್ನು ಹಾಕಬೇಕಿದೆ ಎಂದು ತಿಳಿಸಿದರು.
ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ನಿಮ್ಮನ್ನು ಕರೆಯಿಸಿ ಗೌರವಿಸುವುದು ನಿಮ್ಮ ಪ್ರತಿಭೆಯನ್ನು ನೋಡಿ ನೀವು ಸಹಾ ಮುಂದೆ ಉನ್ನತ ಸ್ಥಾನದಲ್ಲಿದ್ಧಾಗ ಇದನ್ನು ಮರೆಯಬೇಡಿ, ಬೇರೆಯವರಿಗೆ ನೇರವಾಗಿ ಸಮಾಜದ ಋಣವನ್ನು ತೀರಿಸುವ ಕಾರ್ಯವನ್ನು ಮಾಡಿ ಎಂದರು.
ಕ್ಲಿಕ್ ಮಾಡಿ ಓದಿ: Muda scam: ಜನ ನಿಮ್ಮನ್ನು ಕ್ಷಮಿಸುವುದಿಲ್ಲ | ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ
ಈ ಸಂದರ್ಭದಲ್ಲಿ ಸಮಾಜದ ಕಾರ್ಯದರ್ಶಿ ಪಿ.ವಿರೇಂದ್ರಕುಮಾರ್, ನಿರ್ದೇಶಕರುಗಳಾದ ಸಿದ್ದವ್ವನಹಳ್ಳಿ ಪರಮೇಶ್, ತಿಪ್ಪೇಸ್ವಾಮಿ, ಕೆ.ಎನ್.ವಿಶ್ವನಾಥಯ್ಯ, ಜಯಪ್ಪ, ಮುಖಂಡರಾದ ಜ್ಞಾನಮೂರ್ತಿ, ರುದ್ರೇಶ್, ರೀನಾ ವೀರಭದ್ರಪ್ಪ, ಮೋಕ್ಷಾ ರುದ್ರಸ್ವಾಮಿ, ಮಲ್ಲಿಕಾರ್ಜನ್ ಸೇರಿದಂತೆ ಇತರರು ಭಾಗವಹಿಸಿದ್ದರು.