Connect with us

    ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 

    ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಮಂಜುಶ್ರೀ, ವರುಣಾ ಅವರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

    ಚಳ್ಳಕೆರೆ

    ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 11 JUNE 2024

    ಚಳ್ಳಕೆರೆ: ನಾಯಕನಹಟ್ಟಿ ಪಟ್ಟಣದಲ್ಲಿ ಶಾಲಾ ಪರೀಕ್ಷೆ ಮೌಲ್ಯಾಂಕ ಮತ್ತು ನಿರ್ಣಯ ಮಂಡಳಿ ನಿವೃತ್ತ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪನವರ ಅಭಿಮಾನಿ ಬಳಗದ ವತಿಯಿಂದ ಮಾದಿಗ ಸಮುದಾಯದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಯಲ್ಲಿ ಶೇ.90 ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಇದನ್ನೂ ಓದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಬಂಧನ

    ಈ ವೇಳೆ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಮಂಜುಶ್ರೀ, ವರುಣಾ ಅವರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

    ಈ ವೇಳೆ ಪಟ್ಟಣ ಪಂಚಾಯತಿ ಸದಸ್ಯ ಜೆ.ಆರ್.ರವಿಕುಮಾರ್ ಮಾತನಾಡಿ, ಶೈಕ್ಷಣಿಕ ಪ್ರಗತಿಯಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

    ಶಿಕ್ಷಣಕ್ಕೆ ಬಡತನ, ಸಿರಿತನದ ತಾರತಮ್ಯವಿಲ್ಲ. ಪರಿಶ್ರಮ ಮತ್ತು ಸತತ ಪ್ರಯತ್ನ ಅಗತ್ಯ. ಗ್ರಾಮೀಣ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಕರೊಂದಿಗೆ ಪೋಷಕರ ಸಹಕಾರ ಅಗತ್ಯವಾಗಿದೆ.

    ಇದನ್ನೂ ಓದಿ: ಐಟಿಐ, ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

    ಗ್ರಾಮೀಣ ಭಾಗದಲ್ಲಿ ಮಕ್ಕಳ ಪೋಷಕರ ಅನಕ್ಷರತೆ, ಜೀವನ ನಡೆಸಲು ಕಷ್ಟದ ಪರಿಸ್ಥಿತಿಯಲ್ಲಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಇಂತಹ ಕೆಲಸವನ್ನು ಮಾಡಬಾರದು. ಸರ್ಕಾರವು ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಸಮಪರ್ಕವಾಗಿ ಬಳಕೆ ಮಾಡಿಕೊಂಡು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಬೇಕು ಎಂದರು.

    ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಲು ಶಿಕ್ಷಣ ಸಹಕಾರಿಯಾಗಿದೆ. ಹೀಗಾಗಿ ಎಲ್ಲ ಪೋಷಕರು, ಶಿಕ್ಷಕರು ಕಾಳಜಿ ವಹಿಸಬೇಕು. ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಇತರೆ ಎಲ್ಲಾ ಸಮುದಾಯದ ಬಡ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಹೆಚ್ಚಾಗಬೇಕಿದೆ ಎಂದು ಸಲಹೆ ನೀಡಿದರು.

    ಇದನ್ನೂ ಓದಿ: ಪೊಲೀಸ್ ತನಿಖೆಗೆ ಕೈ ಜೋಡಿಸುತ್ತಿದ್ದ ಅಗಸ್ತ್ಯ ಇನ್ನಿಲ್ಲ

    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಚನ್ನಕೇಶವ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಶಿಕ್ಷಕರೊಂದಿಗೆ ಪಾಲಕರು ಸಹಕರಿಸಬೇಕು. ಹಿಂದುಳಿದ ಮಕ್ಕಳಿಗೆ ಪ್ರೋತ್ಸಾಹ ನೀಡಿದರೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಹಕಾರಿಯಾಗಲಿದೆ ಎಂದರು.

    ಮುಖ್ಯಶಿಕ್ಷಕ ಎನ್.ಮಹಂತೇಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಕ್ಷೇತ್ರ ಅತ್ಯಂತ ಮಹತ್ವತೆಯಿಂದ ಕೂಡಿದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಯಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳು ಮಕ್ಕಳಲ್ಲಿ ಬೆಳೆಯಬೇಕಾದರೆ ಮನೆಯ ಪರಿಸರ ಹಾಗೂ ಶಾಲೆಯ ಪರಿಸರ ಎರಡೂ ಅತಿ ಮುಖ್ಯ.

    ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ ಪಠ್ಯದಷ್ಟೇ ಇತರೆ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದಲ್ಲಿ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.

    ಇದನ್ನೂ ಓದಿ: ಜೆಇಇ ಫಲಿತಾಂಶ | ರಾಷ್ಟ್ರಮಟ್ಟದಲ್ಲಿ ಚಿತ್ರದುರ್ಗದ SRS ಪಿಯು ವಿದ್ಯಾರ್ಥಿಗಳ ಸಾಧನೆ

    ಕಾರ್ಯಕ್ರಮದಲ್ಲಿ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಂಕರಸ್ವಾಮಿ, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಆರ್.ಶ್ರೀಕಾಂತ್, ಮರಿಪಾಲಯ್ಯ, ಮುಖಂಡರಾದ ತಾರಕೇಶ್, ಮಲ್ಲಿಕಾರ್ಜುನ್, ಎಂ.ಅಜಯ್, ರಾಕೇಶ್, ಅಖಿಲೇಶ್ ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಚಳ್ಳಕೆರೆ

    To Top