CHITRADURGA NEWS | 04 JULY 2026
ಚಿತ್ರದುರ್ಗ: ಜುಲೈ 05 ರಂದು ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಚಿತ್ರದುರ್ಗ ಮತ್ತು ದಾವಣಗೆರೆ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ತಿಳಿಸಿದರು.
ಇದನ್ನೂ ಓದಿ: ಗೃಹ ಜ್ಯೋತಿ | ಪ್ರವರ್ಗ ಮಾಹಿತಿ ಕಡ್ಡಾಯವಲ್ಲ | ಬೆಸ್ಕಾಂ ಸ್ಪಷ್ಟನೆ
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಮತ್ತು ದಾವಣಗೆರೆ ಸರ್ಕಾರಿ ನೌಕರರ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿಯುನಲ್ಲಿ ಶೇ.90 ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಂದ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿತ್ತು.
ಇದರಲ್ಲಿ ಚಿತ್ರದುರ್ಗ ಮತ್ತು ದಾವಣಗೆರೆಯಿಂದ ಒಟ್ಟು 528 ಮಕ್ಕಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಚಿತ್ರದುರ್ಗದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ 120 ವಿದ್ಯಾರ್ಥಿಗಳು, ಪಿಯುನಲ್ಲಿ 141 ದಾವಣಗೆರೆಯಲ್ಲಿ ವಿದ್ಯಾರ್ಥಿಗಳು, ಎಸ್.ಎಸ್.ಎಲ್.ಸಿ.ಯಲ್ಲಿ 125, ಪಿಯುನಲ್ಲಿ 142 ಮಕ್ಕಳು ಸೇರಿದಂತೆ ಇಡೀ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ 4321 ಪಿಯುನಲ್ಲಿ 4497 ಸೇರಿದಂತೆ ಒಟ್ಟು 8819 ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ ಎಂದರು.
ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ 2000 ನಗದು, ಉತ್ತಮವಾದ ಬ್ಯಾಗ್, ಪ್ರಮಾಣ ಪತ್ರ, ಶಾಲು, ಹಾರ ಹಾಗೂ ಪುಸ್ತಕಗಳನ್ನು ಒಳಗೊಂಡಿದೆ.
ಇದನ್ನೂ ಓದಿ: ಜಿಲ್ಲಾಧಿಕಾರಿ ವರ್ಗಾವಣೆ ಆದೇಶಕ್ಕೆ ತಡೆ
ಕಾರ್ಯಕ್ರಮವವನ್ನು ರಾಜ್ಯ ಸಂಘ ನಡೆಸುತ್ತಿದ್ದು, ಇದಕ್ಕೆ ಜಿಲ್ಲಾ ಸಂಘ ಜೊತೆಯಾಗಿ ವೇದಿಕೆ ರೂಪಿಸಿದೆ. ಈ ಎಲ್ಲಾ ಕಾರ್ಯಕ್ರಮವನ್ನು ಸರ್ಕಾರದ ಅನುದಾನ ಇಲ್ಲದೆ ಸದಸ್ಯರು ನೀಡುವಂತ ವಂತಿಕೆಯಡಿಯಲ್ಲಿ ನಡೆಸಲಾಗುತ್ತಿದೆ ಎಂದರು.
ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳು, ಹೊಸದುರ್ಗ ಮದುರೆಯ ಶ್ರೀ ಭಗೀರಥ ಗುರುಪೀಠದ ಡಾ.ಶ್ರೀ ಪುರುಷೋತ್ತಮಾನಂದ ಪುರಿ ಶ್ರೀಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಗಳಾದ ರವಿ.ಡಿ.ಚೆನ್ನಣ್ಣ ಹಾಗೂ ಇನ್ ಸೈಟ್ ಐಎಎಸ್ ಸ್ಟಡಿ ಸೆಂಟರ್ನ ಸಂಸ್ಥಾಪಕ ನಿರ್ದೆಶಕರಾದ ವಿನಯಕುಮಾರ್, ಜಿಲ್ಲಾಧಿಕಾರಿಗಳಾದ ಟಿ.ವೆಂಕಟೇಶ್, ಜಿ.ಪಂ.ಸಿಇಓ ಡಾ.ಎಸ್ ಆಕಾಶ್, ಜಿಲ್ಲಾ ರಕ್ಷಣಾಧಿಕಾರಿಗಳಾದ ರಂಜೀತ್ ಕುಮಾರ್ ಭಂಡಾರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಬಸವರಾಜು, ಖಂಜಾಚಿ ವಿವಿ ಶಿವರುದ್ರಯ್ಯ, ಗೌರವಾಧ್ಯಕ್ಷರಾದ ಮಲ್ಲಿಕಾರ್ಜನ ಬಿ. ಕಾರ್ಯಾಧ್ಯಕ್ಷರಾದ ಶಂಭುಗೌಡ, ಹಿರಿಯ ಉಪಾಧ್ಯಕ್ಷರಾದ ನಾಗರಾಜ ಆರ್.ಜುಮ್ಮನ್ನವರ, ಸುರೇಶ್ ಸಿ ಶೆಡಶ್ಯಾಳ, ಸೋಮಶೇಖರ್ಯ್ಯ, ಮೋಹನ್ಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಇದನ್ನೂ ಓದಿ: ಕೋಳಿ ಅಥವಾ ಮೀನು ತಿಂದ ನಂತರ ಈ ಆಹಾರಗಳನ್ನು ತಪ್ಪಿಸಬೇಕು?
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಜಿಲ್ಲಾ ಖಂಜಾಚಿ ಮಲ್ಲಿಕಾರ್ಜನ, ರಾಜ್ಯ ಪರಿಷತ್ ಸದಸ್ಯರಾದ ರಾಜಪ್ಪ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಸಿ.ಟಿ, ವಿರೇಶ್, ಹಿರಿಯೂರು ರಮೇಶ್ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
