ಲೋಕಸಮರ 2024
ಹೊಳಲ್ಕೆರೆಯಲ್ಲಿ ಚುನಾವಣಾ ಪೂರ್ವಭಾವಿ ಸಭೆ | ಶಾಸಕ ಎಂ.ಚಂದ್ರಪ್ಪ, ಅಭ್ಯರ್ಥಿ ಗೋವಿಂದ ಕಾರಜೋಳ ಭಾಗೀ

CHITRADURGA NEWS | 03 APRIL 2024
ಹೊಳಲ್ಕೆರೆ : ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಬುಧವಾರ ನಡೆದ ವಿಧಾನಸಭಾ ಕ್ಷೇತ್ರದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಂ. ಚಂದ್ರಪ್ಪ, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭಾಗವಹಿಸಿದ್ದರು.
ಇದನ್ನೂ ಓದಿ: ನಿಮ್ಮ ಊರಿನಲ್ಲಿ ಲೀಡ್ ಕೋಡಿ ಶಾಸಕ ಟಿ.ರಘುಮೂರ್ತಿ
ಈ ವೇಳೆ ಮಾತನಾಡಿದ ಶಾಸಕ ಎಂ.ಚಂದ್ರಪ್ಪ 30 ವರ್ಷಗಳಿಂದ ಸಾರ್ವಜನಿಕರ ಬದುಕನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದ್ದೇನೆ, ಕಳೆದ ಮೂರು ವರ್ಷಗಳಿಂದ ನನ್ನ ಮಗ ಎಂ.ಸಿ ರಘು ಚಂದನ್ ಚಿತ್ರದುರ್ಗ ಲೋಕಸಭಾ ಕ್ಷೇತ್ರದಾದ್ಯಂತ ಹಳ್ಳಿಗಳನ್ನು ಸುತ್ತಾಡಿ ಸಂಘಟನೆ ಮಾಡಿದ್ದಾನೆ.
ಈ ಬಾರಿ ಪಾರ್ಲಿಮೆಂಟ್ ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಸೆಯಿಂದ ಟಿಕೆಟ್ ಕೇಳಿದ್ದು ನಿಜ, ಆದರೆ ಪಕ್ಷದ ವರಿಷ್ಠರು ಗೋವಿಂದ್ ಕಾರಜೋಳರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದೆ, ಅದಕ್ಕಾಗಿ ನಾನು ಬೇಸರ ಪಟ್ಟುಕೊಳ್ಳುವುದಿಲ್ಲ ನನ್ನಿಂದ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದು ಗೋವಿಂದ ಕಾರಜೋಳರವರಲ್ಲಿ ಕೇಳಿಕೊಂಡರು.
ಇದನ್ನೂ ಓದಿ: ಅಡಿಕೆ ತೋಟದಲ್ಲಿ ಗಾಂಜಾ ಬೆಳೆ ಹತ್ತು ವರ್ಷ ಜೈಲು ಶಿಕ್ಷೆ
ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಬೇಕು, ಅದಕ್ಕಾಗಿ ಈ ಬಾರಿ ಲೋಕಸಭೆ ಚುನಾವಣೆಯನ್ನು ಹಗುರವಾಗಿ ತೆಗೆದುಕೊಳ್ಳಬಾರದು ಕ್ಷೇತ್ರದ ಜನ ಆಗಲು ರಾತ್ರಿ ಸುತ್ತಾಡಿ ಹೆಚ್ಚಿನ ಮತಗಳನ್ನು ನೀಡಬೇಕು ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, 2024ರ ಪಾರ್ಲಿಮೆಂಟ್ ಚುನಾವಣೆ ದೇಶಕ್ಕಾಗಿ, ಮೋದಿಗಾಗಿ ನಡೆಯುವ ಚುನಾವಣೆ. ದೇಶಕ್ಕೆ ಸ್ವಾತಂತ್ರ ಬಂದು 70 ವರ್ಷಗಳಲ್ಲಿ 60 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ದೇಶವನ್ನಾಳಿದೆ. ನರೇಂದ್ರ ಮೋದಿ 10 ವರ್ಷಗಳ ಕಾಲ ಪ್ರಧಾನಿಯಾಗಿದ್ದುಕೊಂಡು ದುಪ್ಪಟ್ಟು ಅಭಿವೃದ್ಧಿ ಮಾಡಿರುವುದನ್ನು ದೇಶದ ಜನ ತುಲನಾತ್ಮಕವಾಗಿ ನೋಡುತ್ತಿದ್ದಾರೆ, ಒಂದೇ ಕುಟುಂಬದವರು 38 ವರ್ಷಗಳ ಕಾಲ ದೇಶವನ್ನು ಆಳಿದ್ದಾರೆ.
ಇದನ್ನೂ ಓದಿ: ಎಚ್ಚರ ಮನೆಯಿಂದ ಹೊರ ಬರಬೇಡಿ
ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ಕೀರ್ತಿ ಗೌರವ ಹೆಚ್ಚಾಗಿದೆ. ವಿದ್ಯಾವಂತರ ಸಂಖ್ಯೆ ಜಾಸ್ತಿಯಾಗಿದೆ. ಮೋದಿ ಅವರ ಡ್ರಮ್ ಕಾರ್ಡ್ ಇಟ್ಟುಕೊಂಡು ಬೇರೆ ಕಡೆ ಅಲೆಯಬೇಕಾಗಿಲ್ಲ, ಸ್ವಂತ ನಮ್ಮ ದೇಶದ ಪ್ರಧಾನಿ ಆಗಿರುವುದರಿಂದ ಅವರ ಕೈ ಬಲಪಡಿಸಲು ಇದೇ ತಿಂಗಳ 26ರಂದು ನಡೆಯುವ ಚುನಾವಣೆಯಲ್ಲಿ ಬಹುಮತದಿಂದ ಗೆಲ್ಲಿಸಿ ಎಂದು ಮತದಾರರಲ್ಲಿ ವಿನಂತಿಸಿದರು.
ಇದನ್ನೂ ಓದಿ: 6 ರಂದು ಶನೇಶ್ವರ ಸ್ವಾಮಿ ದೇಗುಲ ಲೋಕಾರ್ಪಣೆ
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಲೋಕಸಭಾ ಚುನಾವಣೆ ಸಂಚಾಲಕ ಎಸ್.ಲಿಂಗಮೂರ್ತಿ, ಬಿಜೆಪಿ ಮಂಡಲ ಅಧ್ಯಕ್ಷ ಎಂ.ಬಿ. ಸಿದ್ದೇಶ್, ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಶೈಲೇಶ್, ಪುರಸಭೆ ಸದಸ್ಯರು, ಹಿರಿಯ ಮುಖಂಡರುಗಳು, ಪಕ್ಷದ ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರು, ವಿವಿಧ ಮೋರ್ಚಾ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
