CHITRADURGA NEWS | 25 MAY 2026
ಚಿತ್ರದುರ್ಗ: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಬೈಕ್ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ಗರಿಷ್ಠ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ಗರಿಷ್ಠ ರೂ. 1.00 ಲಕ್ಷದ ಒಳಗಿರಬೇಕು.
ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಅರ್ಹತೆ ಮತ್ತು ಅಗತ್ಯ ದಾಖಲೆಗಳ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ https://bcwd.karnataka.gov.in/ ಅನ್ನು ನೋಡಬಹುದು.
ಇದನ್ನೂ ಓದಿ: ಕ್ಷಯರೋಗಕ್ಕೆ ನಿಗದಿತ ಉಚಿತ ಚಿಕಿತ್ಸೆ ಲಭ್ಯ
ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳು ಎದುರಾದಲ್ಲಿ bcwdhelpline@gmail.com ಗೆ ಇಮೇಲ್ ಕಳುಹಿಸಬಹುದು ಅಥವಾ ಇಲಾಖೆಯ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದು.
ಹೊಸ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 20.05.2026 ರಿಂದ ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು 08.06.2026 ಕೊನೆಯ ದಿನಾಂಕವಾಗಿರುತ್ತದೆ.
ಸಲ್ಲಿಕೆಯಾದ ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲಿಸಲು 11.06.2026 ಅಂತಿಮ ದಿನವಾಗಿದೆ. ತದನಂತರ, ತಾಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು 13.06.2026 ರಂದು ಪ್ರಕಟಿಸಲಾಗುವುದು.
ಇದನ್ನೂ ಓದಿ: ಹೊಳಲ್ಕೆರೆ | ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಅಹ್ವಾನ
ಕೊನೆಯದಾಗಿ, ಪಟ್ಟಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು 20.06.2026 ಅನ್ನು ಅಂತಿಮ ದಿನಾಂಕವಾಗಿ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

