
CHITRADURGA NEWS | 19 MAY 2025
ಚಿತ್ರದುರ್ಗ: 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Also Read: ದಾವಣಗೆರೆ – ಚಿತ್ರದುರ್ಗ – ತುಮಕೂರು ರೈಲು ಮಾರ್ಗ | 2027 ಡಿಸೆಂಬರ್‌ಗೆ ಪೂರ್ಣ | ಸಚಿವ ವಿ. ಸೋಮಣ್ಣ
ಮೇ.16 ರಿಂದ ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದ್ದು, ಜೂನ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಜೂನ್ 20ರಂದು ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ನಡೆಸುವರು. ಜೂನ್ 23ರಂದು ತಾಲ್ಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.
ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಜೂನ್ 30 ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
Also Read: RAIN: ಜಿಲ್ಲೆಯಾದ್ಯಂತ ಭರ್ಜರಿ ಮಳೆ | ತುಂಬಿ ಹರಿದ ಹಳ್ಳ, ಕೊಳ್ಳಗಳು


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
