CHIYTRADURGA NEWS | 10 OCTOBER 2025
ಚಿತ್ರದುರ್ಗ: ಆಳುವ ಸರ್ಕಾರಗಳು ಶೋಷಿತರು, ಬಹುಸಂಖ್ಯಾತರ ವಿರುದ್ದ ಕಾನೂನುಗಳನ್ನು ಜಾರಿಗೆ ತರುತ್ತಿರುವುದರ ವಿರುದ್ದ ಜನಜಾಗೃತಿ ಮೂಡಿಸುವುದಕ್ಕಾಗಿ ಕಾನ್ಶಿರಾಂ ಅವರ 19ನೇ ಪರಿನಿಬ್ಬಾಣದ ದಿನವಾದ ಗುರುವಾರದಿಂದ ಡಿ.6 ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪರಿನಿಬ್ಬಾಣದವರೆಗೂ ಜನಸಂಖ್ಯೆಗೆ ಅನುಗುಣವಾಗಿ ತಕ್ಕ ಪಾಲು, ಎಲ್ಲರಿಗೂ ಬೇಕು ಗೌರವದ ಬಾಳು ಬಹುಜನ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಕಾರ್ಯದರ್ಶಿ ಭೀಮನಕೆರೆ ಶಿವಮೂರ್ತಿ ಹೇಳಿದರು.
ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ 2 ವಿಶೇಷ ರೈಲು | ಯಾವ ಮಾರ್ಗದ ಮೂಲಕ ಹೋಗಲಿವೆ.. ಇಲ್ಲಿದೆ ಮಾಹಿತಿ
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಸಂಘಟಿತರನ್ನು ಸಂಘಟಿಸಿ ಉದ್ಯೋಗ ಸೃಷ್ಟಿಸುವ ಕೆಲಸವನ್ನು ಕಾನ್ಷಿರಾಂ ಮಾಡಿದ್ದಾರೆ. ಹಾಗಾಗಿ ರಾಜ್ಯಾದ್ಯಂತ ಜನಸಂಖ್ಯೆಗನುಗುಣವಾಗಿ ಎಲ್ಲರಿಗೂ ಸಮಾನವಾದ ಪಾಲು ಸಿಗಬೇಕೆನ್ನುವುದು ಆಂದೋಲನ ಉದ್ದೇಶ ಎಂದರು.
ಆಳುವ ಸರ್ಕಾರಗಳು ಶೋಷಿತರನ್ನು ಹೇಗೆ ವಂಚಿಸುತ್ತ ಬರುತ್ತಿವೆ ಎನ್ನುವುದನ್ನು ದಲಿತರಿಗೆ ಮನವರಿಕೆ ಮಾಡಿಕೊಡಲು ಆಂದೋಲನ ಹಮ್ಮಿಕೊಂಡಿದ್ದು, ಕಾನ್ಷಿರಾಂರವರ ಕನಸಿನಂತೆ ಅಧಿಕಾರ ಹಿಡಿಯಬೇಕಾಗಿರುವುದರಿಂದ ತಳಮಟ್ಟದಿಂದ ಪಕ್ಷವನ್ನು ಸಂಘಟಿಸಲಾಗುವುದೆಂದರು.
ಇದನ್ನೂ ಓದಿ: ಈರುಳ್ಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾದ ರೈತರು | ಈರುಳ್ಳಿ ಸುರಿದು ಪ್ರತಿಭಟನೆ
ಜಿಲ್ಲಾಧ್ಯಕ್ಷ ಎನ್.ಪ್ರಕಾಶ್, ರಾಜ್ಯ ಕಾರ್ಯದರ್ಶಿ ಕೆ.ಎನ್.ದೊಡ್ಡೆಟ್ಟಪ್ಪ, ಲಕ್ಷ್ಮಮ್ಮ ಹನುಮಂತರಾಯ, ರಾಘವೇಂದ್ರ, ಮಲ್ಲಿಕಾರ್ಜುನ, ಚಂದ್ರಣ್ಣ, ಪರಮೇಶ್ವರಪ್ಪ, ಕೂನಬೇವು ಮಹಾಂತೇಶ್, ಜಗದೀಶ್, ರಾಜೇಶ್, ಜಯಣ್ಣ, ಸತೀಶ್, ರಾಮಸ್ವಾಮಿ ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
