ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿ | ಸುಧಾರಿತ ಅಡಿಕೆ ಬೇಸಾಯ ತರಬೇತಿ | ಆಸಕ್ತ 50 ರೈತರಿಗೆ ಅವಕಾಶ

CHITRADURGA NEWS | 05 FEBRUARY 2024

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.8ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ ‘ಅಡಿಕೆ ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | ಫೆಬ್ರವರಿ 5 ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿತ್ತು

ಕಾರ್ಯಕ್ರಮದಲ್ಲಿ ಶಿವಮೊಗ್ಗ ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ನಾಗರಾಜ್ ಅಡಿವಪ್ಪರ್, ತೋಟಗಾರಿಕೆ ತಜ್ಞ ಡಾ.ಸುದೀಪ್, ಕೀಟಶಾಸ್ತ್ರ ತಜ್ಞೆ ಡಾ.ಸ್ವಾತಿ, ರೋಗ ಶಾಸ್ತ್ರ ತಜ್ಞ ಡಾ.ಕಿರಣ್, ಅಡಿಕೆ ಬೆಳೆಯಲ್ಲಿ ತಳಿಗಳ ಆಯ್ಕೆ, ಬೇಸಾಯಕ್ರಮ, ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆಯ ಕುರಿತು ಪ್ರಾತ್ಯಕ್ಷಿಕೆ ನೀಡುವರು.

ಆಸಕ್ತ 50 ಜನ ರೈತರು ತರಬೇತಿಯಲ್ಲಿ ಭಾಗವಹಿಸಲು ಶ್ರೀ ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿಕೇಂದ್ರ, ಬಬ್ಬೂರು ಫಾರಂ (8277931058), ಶ್ರಿಮತಿ ಉಷಾರಾಣಿ ಎಂ., ಸಹಾಯಕ ಕೃಷಿ ನಿರ್ದೇಶಕರು (ರೈ.ಮ) (9980730696), ಟಿ.ಪಿ. ರಂಜಿತಾ, ಕೃಷಿ ಅಧಿಕಾರಿ (8277930959), ಶ್ರೀ ಸಿಕಂದರ್ ಬಾಷಾ, ಕೃಷಿ ಅಧಿಕಾರಿ (8277931028) ಮತ್ತು ಪವಿತ್ರಾ ಎಂ. ಜೆ. (9535412286) ರವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಇದನ್ನೂ ಓದಿ: ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆಯ ಕಾಂಪೋಸ್ಟ್ ಕಲ್ಚರ್‍ನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version