CHITRADURGA NEWS | 23 JANUARY 2026
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಆರು ವರ್ಷಗಳ ನಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮುಂಬರುವ ಫೆಬ್ರವರಿ 17 ಮತ್ತು 18 ರಂದು ಜಿಲ್ಲೆಯ 18 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಜ.24 ರಂದು ವಿದ್ಯತ್ ವ್ಯತ್ಯಯ
ಸಾಹಿತ್ಯ ಸಮ್ಮೇಳನದ ಸಿದ್ಧತೆಯಾಗಿ ಜಿಲ್ಲಾ ಉಸ್ತುವಾರಿ ಸಚಿವರು ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಸಂಬಂದಿಸಿದ ಸಿದ್ಧತೆಗಳನ್ನು ಕೈಗೊಳ್ಳುವ ನಿಮಿತ್ತ ಜಿಲ್ಲೆಯ ಸಾಹಿತಿಗಳು, ಸಾಹಿತ್ಯಾಸಕ್ತರು, ಕನ್ನಡಪರ ಸಂಘಟನೆಗಳು, ರೈತ ಸಂಘ, ನೌಕರರ ಸಂಘ, ನೀರಾವರಿ ಹೋರಾಟ ಸಮಿತಿ,ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ಎಲ್ಲ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ತಮ್ಮ ಸಲಹೆ ಮತ್ತು ಸಹಕಾರ ನೀಡಲು ಕೋರಿದ್ದಾರೆ.
ಇದನ್ನೂ ಓದಿ: ಉಚಿತ ಜಿಮ್ ಮತ್ತು ಫಿಟ್ನೆಸ್ ತರಬೇತಿ | ಪರಿಶಿಷ್ಟ ಜಾತಿಯ ಯುವಕರಿಂದ ಅರ್ಜಿ ಅಹ್ವಾನ
ಈ ಹಿನ್ನೆಲೆಯಲ್ಲಿ ಜ.24 ಶನಿವಾರ ಸಂಜೆ 4 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಭೆ ಕರೆಯಲಾಗಿದೆ. ಎಲ್ಲ ಕನ್ನಡಾಸಕ್ತರು ಭಾಗವಹಿಸಲು ಮನವಿ ಮಾಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
