CHITRADURGA NEWS | 19 APRIL 2025
ಚಿತ್ರದುರ್ಗ: 2025-26ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ನಿಯಮಾನುಸಾರ ಅರ್ಹತಾ ಪರೀಕ್ಷೆ ಮೂಲಕ 6ನೇ ತರಗತಿಗೆ ದಾಖಲಾತಿ ಮಾಡಿಕೊಂಡು ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ನೀಡಲು ಜಿಲ್ಲೆಯ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
Also Read: 60 ಸಾವಿರದತ್ತ ಅಡಿಕೆ ಧಾರಣೆ | ಇಂದಿನ ಚನ್ನಗಿರಿ ಮಾರುಕಟ್ಟೆ ರೇಟ್
ಅರ್ಹ ವಿದ್ಯಾರ್ಥಿಗಳು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗಳಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗಳಿಗೆ ಸಲ್ಲಿಸುವುದು.
ಇದೇ ಏಪ್ರಿಲ್ 19 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಮೇ 03 ಸಂಜೆ 5 ಅರ್ಜಿ ಸಲ್ಲಿಸಲು ಕೊನೆಯ ದಿನ. ಅಪೂರ್ಣಗೊಂಡ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಕಡ್ಡಾಯವಾಗಿ ತಿರಸ್ಕರಿಸಲಾಗುವುದು.
ಷರತ್ತು:
2025-26ನೇ ಸಾಲಿನ ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಉಚಿತವಾಗಿ ಅರ್ಹತಾ ಪರೀಕ್ಷಾ ಮೂಲಕ ಆಯ್ಕೆ ಮಾಡಲಾಗುವುದು.
Also Read: ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡಂಗಡಿಗಳ ತೆರವುಗೊಳಿಸಲು ಸೂಚನೆ
5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಗೊಂಡ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ದಾಖಲು ಮಾಡಲಾಗುವುದು.
6ನೇ ತರಗತಿಗೆ ಮಾತ್ರ ಜಿಲ್ಲೆಗೆ ನಿಗಧಿ ಪಡಿಸಿರುವ ಗುರಿಗೆ ಅನುಗುಣವಾಗಿ ನಿಯಮಾನುಸಾರ ಪ್ರವೇಶ ಅವಕಾಶವನ್ನು ನೀಡಲಾಗುವುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ.2.00 ಲಕ್ಷಗಳ ಮಿತಿಯೊಳಗೆ ಇರಬೇಕು.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ದೃಢೀಕೃತ ಅಂಕಪಟ್ಟಿಯನ್ನು ಅರ್ಜಿ ಜೊತೆ ಕಡ್ಡಾಯವಾಗಿ ಸಲ್ಲಿಸುವುದು. ಮುಖ್ಯೋಪಾಧ್ಯಾಯರಿಂದ ಕಡ್ಡಾಯವಾಗಿ ಶೇಕಡವಾರು ನಮೂದಿಸಿದ ಅಂಕಪಟ್ಟಿಯನ್ನು ಮಾತ್ರ ಪರಿಗಣಿಸಲಾಗುವುದು, ಅಂಕಪಟ್ಟಿಯಲ್ಲಿ ಗ್ರೇಡ್ ಅನ್ನು ನಮೂದಿಸಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ವಿದ್ಯಾರ್ಥಿಗಳ ಶುಲ್ಕ ಮತ್ತು ನಿರ್ವಹಣಾ ವೆಚ್ಚವನ್ನು ಸರ್ಕಾರ ನಿಗಧಿ ಪಡಿಸಿದ ದರದಲ್ಲಿ ನೀಡಲಾಗುವುದು.
Also Read: ಹೊಸ ಹೈವೇ ಕಳಪೆ ಕಾಮಗಾರಿ, ಆಮೆಗತಿ ಕೆಲಸ | ಗುತ್ತಿಗೆದಾರ ಬ್ಲಾಕ್ ಲಿಸ್ಟ್
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಗೆ ಒಳಪಟ್ಟಿರಬೇಕು. ಪೆÇೀಷಕರು ಒಂದು ಬಾರಿ ಶಾಲೆಯನ್ನು ಆಯ್ಕೆಗೊಳಿಸಿದ ಮೇಲೆ ಅದೇ ಶಾಲೆಗೆ ದಾಖಲಾತಿ ಮಾಡಲಾಗುವುದು ಯಾವುದೇ ಕಾರಣಕ್ಕೂ ಶಾಲೆಯನ್ನು ಬದಲಾಯಿಸುವುದಿಲ್ಲ. ಹಾಗೂ ಆಯ್ಕೆಯಾದ ವಿದ್ಯಾರ್ಥಿಯು ಆಯ್ಕೆಯಾದ ಶಾಲೆಯಲ್ಲಿ ಯಾವ ಪಠ್ಯಕ್ರಮ ಇರುತ್ತದೆಯೋ ಅದೇ ಪಠ್ಯಕ್ರಮದಲ್ಲಿ ವಿದ್ಯಾಬ್ಯಾಸ ಮಾಡುವುದು.
ಈ ಷರತ್ತಿನಲ್ಲಿ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
