
CHITRADURGA NEWS | 12 July 2026
ಚಿತ್ರದುರ್ಗ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸುಪ್ರೀಂಕೋರ್ಟ್ ಟಿಇಟಿ ಪರೀಕ್ಷೆ ಕಡ್ಡಾಯಗೊಳಿಸಿರುವುದನ್ನು ಸಂಸತ್‍ನಲ್ಲಿ ತಿದ್ದುಪಡಿಗೊಳಿಸಿ ಟಿಇಟಿ ಪರೀಕ್ಷೆಯನ್ನು ರದ್ದುಪಡಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ದೊರಕಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಶಾಖೆಯಿಂದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸಂಸದ ಗೋವಿಂದ ಎಂ.ಕಾರಜೋಳ ಅವರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ನಮ್ಮ ಜನ್ಮ ದಿನಾಚರಣೆ ಬೇಡ | ಮಠದ ವಾರ್ಷಿಕೋತ್ಸವ ಆಚರಿಸೋಣ | ಮಾದಾರ ಚನ್ನಯ್ಯ ಶ್ರೀ
ಉನ್ನತ ಶಿಕ್ಷಣ ಪಡೆದು ಇಷ್ಟು ವರ್ಷಗಳಿಂದಲೂ ಮಕ್ಕಳಿಗೆ ಪಾಠ ಮಾಡಿಕೊಂಡು ಬರುತ್ತಿದ್ದೇವೆ. ಈಗ ಏಕಾಏಕಿ ಎಲ್ಲಾ ಶಿಕ್ಷಕರು ಕಾಲಮಿತಿಯೊಳಗೆ ಟಿಇಟಿ. ಪರೀಕ್ಷೆ ಕಡ್ಡಾಯವಾಗಿ ಪಾಸ್ ಮಾಡಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ ಹೇಳಿರುವುದು ನುರಿತ ಅನುಭವಿ ಶಿಕ್ಷಕರಿಗೆ ಆಘಾತವನ್ನುಂಟು ಮಾಡಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ನೀಡಿದ ಮನವಿ ಸ್ವೀಕರಿಸಿದ ಸಂಸದ ಗೋವಿಂದ ಎಂ.ಕಾರಜೋಳರವರು ಸಂಸತ್‍ನಲ್ಲಿ ನಿಮ್ಮ ಸಮಸ್ಯೆ ಬಗ್ಗೆ ಧ್ವನಿ ಎತ್ತಿ ನ್ಯಾಯ ದೊರಕಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಮಾರುತೇಶ್ ಆರ್, ಜಿಲ್ಲಾಧ್ಯಕ್ಷ ಜಿ.ಬಿ.ಮಹಾಂತೇಶ್, ಪ್ರಧಾನ ಕಾರ್ಯದರ್ಶಿ ಜಿ.ಟಿ.ಹನುಮಂತಪ್ಪ, ಜಿಲ್ಲೆಯ ಆರು ತಾಲ್ಲೂಕಿನ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಶಿಕ್ಷಕರುಗಳು ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

