Connect with us

ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಆದ್ಯತೆ | ಗೋವಿಂದ ಕಾರಜೋಳ

ಸಾರ್ವಜನಿಕ ಸಭೆಯಲ್ಲಿ ಗೋವಿಂದ ಕಾರಜೋಳ

ಲೋಕಸಮರ 2024

ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಆದ್ಯತೆ | ಗೋವಿಂದ ಕಾರಜೋಳ

CHITRADURGA NEWS | 12 APRIL 2024

ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ಇನ್ನು ಹೆಚ್ಚಿನ ಅಭಿವೃದ್ದಿ ಕೈಗೊಳ್ಳುವುದರ ಜೊತೆಗೆ ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಗೋವಿಂದ ಕಾರಜೋಳ ಹೇಳಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ ಪ್ರಚಾರ ಅಖಾಡಕ್ಕೆ ಬಿ.ಎಸ್.ಯಡಿಯೂರಪ್ಪ

ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಹಿರೇಹಳ್ಳಿಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರಾರ್ಥವಾಗಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಘೋಷಿಸಿದೆ.

ಇನ್ನು ರಾಜ್ಯ ಸರ್ಕಾರದ ಪಾಲೇನು ಎಂದು ಪ್ರಶ್ನಿಸಿದ ಗೋವಿಂದ ಕಾರಜೋಳರವರು ಎಲ್ಲದಕ್ಕೂ ಕೇಂದ್ರದ ಮೇಲೆ ಆಪಾದನೆ ಹೊರಿಸುವುದು ಸರಿಯಲ್ಲ. ಕೇಂದ್ರ ಮಂತ್ರಿಯಾಗಿದ್ದ ಎ.ನಾರಾಯಣಸ್ವಾಮಿ ಕೇಂದ್ರೀಯ ವಿದ್ಯಾಲಯಕ್ಕೆ ಒತ್ತು ನೀಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ಇನ್ನು ಹೆಚ್ಚಿನ ಅಭಿವೃದ್ದಿ ಕೈಗೊಳ್ಳುವುದರ ಜೊತೆಗೆ ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಇದರಿಂದ ವ್ಯಾಪಾರ, ವಹಿವಾಟು, ಪ್ರವಾಸೋದ್ಯಮ, ವಾಣಿಜ್ಯ ಚಟುವಟಿಕೆಗಳು ಗರಿಗೆದರಲಿದೆ ಎಂದರು.

ಇದನ್ನೂ ಓದಿ: ಹೊಸದುರ್ಗ ಆರ್.ಪಿ.ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಜಾಗತಿಕ ಮಟ್ಟದಲ್ಲಿ ಭಾರತ ದೇಶವನ್ನು ವಿಶ್ವಗುರುವಿನ ಸ್ಥಾನಕ್ಕೆ ಏರಿಸುವಲ್ಲಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಅವರ ಕೈಯನ್ನು ಮತ್ತೊಮ್ಮೆ ಬಲಪಡಿಸುವದರ ಜೊತೆ ಜೊತೆಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷಕ್ಕೆ ಬೆಂಬಲಿಸಲು ಎನ್‍ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ ಮಾಡಿದರು.

ಇದನ್ನೂ ಓದಿ: ರಂಜಾನ್ ಅರ್ಥಪೂರ್ಣ ಆಚರಣೆ

ಬಿ.ಎಸ್.ಯಡಿಯೂರಪ್ಪ ಹಾಗೂ ಬೊಮ್ಮಾಯಿರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸಮಾಜ ಕಲ್ಯಾಣ ಇಲಾಖೆ ಹಾಗೂ ನೀರಾವರಿ ಸಚಿವನಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ. ಮೂರನೇ ಬಾರಿಗೆ ನರೇಂದ್ರಮೋದಿ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಕಾರ್ಯಕರ್ತರು ಪ್ರತಿ ಬೂತ್‍ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ನಮ್ಮ ಸರ್ಕಾರದ ಸಾಧನೆಗಳನ್ನು ಜನತೆಗೆ ತಿಳಿಸಿ ಹೆಚ್ಚಿನ ಬಹುಮತಗಳಿಂದ ಗೆಲ್ಲಿಸಿ ಪಾರ್ಲಿಮೆಂಟ್‍ಗೆ ಕಳಿಸಿಕೊಡಿ ಎಂದು ವಿನಂತಿಸಿದರು.

ಇದನ್ನೂ ಓದಿ: ವೇದ ಪಿಯು ಕಾಲೇಜು | ಅತ್ಯುತ್ತಮ ಸಾಧನೆಯ ಫಲಿತಾಂಶ

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ತಿಪ್ಪೇಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಮುರಳಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುನಾಥ, ಓಬಳೇಶ್ , ಜಯಾಪಾಲಯ್ಯ, ಜೆಡಿಎಸ್ ಮುಖಂಡರಾದ ವೀರಭದ್ರಪ್ಪ, ನಾಯಕನಹಟ್ಟಿ ಬಿಜೆಪಿ ಮಂಡಲ ಅಧ್ಯಕ್ಷರಾದ ರಾಮರೆಡ್ಡಿ, ಮೊಳಕಾಲ್ಮುರು ಮಂಡಲ ಅಧ್ಯಕ್ಷರಾದ ಡಾ ಮಂಜುನಾಥ್,, ಜೆಡಿಎಸ್ ತಾಲೂಕು ಅಧ್ಯಕ್ಷರಾದ ಕರಿಬಸಪ್ಪ, ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಮಲ್ಲೇಶ್, ಬಿಜೆಪಿ ಮುಖಂಡರಾದ ಪ್ರವೀಣ್, ಜೆಡಿಎಸ್ ಮುಖಂಡರಾದ ರಂಗಸ್ವಾಮಿ, ನಾಗರಾಜ, ನಾಗೇಂದ್ರಪ್ಪ,ರೂಪ್ ತಿಪ್ಪೇಸ್ವಾಮಿ, ಹಾಗೂ ಬಿಜೆಪಿ – ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ಲೋಕಸಮರ 2024

To Top
Exit mobile version