
CHITRADURGA NEWS | 13 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಗೋವಿಂದ ಎಂ.ಕಾರಜೋಳ ಅವರು ಗುರುವಾರ ನಗರದ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಅವರು, ‘ನೀರು ಮತ್ತು ರೈಲು ಮಾರ್ಗ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಭದ್ರಾ ಯೋಜನೆಗೆ ₹ 5,300 ಕೋಟಿ ಬಿಡುಗಡೆ ಮಾಡಿಸಲಾಗುತ್ತದೆ. ಕ್ಷೇತ್ರದ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತದೆ’ ಎಂದರು.
‘ಬಹು ದಿನದ ಬೇಡಿಕೆಯಾದ ನೇರ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಲಾಗುತ್ತದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಜಂಟಿಯಾಗಿ ಕೌಶಲ್ಯ ಅಭಿವೃದ್ದಿ ಕೇಂದ್ರ ಪ್ರಾರಂಭಿಸಬೇಕು. ಈ ಮೂಲಕ ವೃತ್ತಿ ಶಿಕ್ಷಣ, ವೃತ್ತಿ ತರಬೇತಿ ನೀಡುವ ಕಾರ್ಯ ಮಾಡಲಾಗುತ್ತದೆ. ಉದ್ಯೋಗ ಸೃಷ್ಟಿ ಮಾಡುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಿದೆ. ಇದಕ್ಕೆ ಎರಡು ಸರ್ಕಾರಗಳಲ್ಲಿ ಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: ತಿಪ್ಪಾರೆಡ್ಡಿ ಅಂದ್ರೆ ನೀವೇನಾ..!? | ಪ್ರತಿಭಟನೆ ಮಾಡಿದ್ದಕ್ಕೆ ಬಂತು ಬೆದರಿಕೆ ಕರೆ
ಕಬೀರಾನಂದ ಆಶ್ರಮ, ಯಾದವ ಮಠ, ಮುರುಘಾ ಮಠ, ಮಡಿವಾಳ ಮಾಚಿದೇವ ಮಠ, ಕೇತೇಶ್ವರ ಮಠ, ಛಲವಾದಿ ಮಠ ಹಾಗೂ ರಾಮತೀರ್ಥ ಆಶ್ರಮಕ್ಕೆ ಭೇಟಿ ನೀಡಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರಳಿ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಮಾಧ್ಯಮ ವಕ್ತಾರರಾದ ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್, ಕಬೀರಾನಂದಾಶ್ರಮದ ಕಾರ್ಯದರ್ಶಿ ವಿ.ಎಲ್.ಪ್ರಶಾಂತ, ಗಣಪತಿ ಶಾಸ್ತ್ರಿ, ಕುಡಾ ಮಾಜಿ ಸದಸ್ಯ ಓಂಕಾರ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
