CHITRADURGA NEWS | 10 OCTOBER 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಬತ್ತಿಹೋಗಿರುವ ಕೊಳವೆಬಾವಿಗಳನ್ನು ಗುರುತಿಸಿ, ಕನಿಷ್ಟ 1 ಸಾವಿರ ಕೊಳವೆಬಾವಿಗಳಿಗೆ ಆದ್ಯತೆಯ ಮೇಲೆ ಅಂತರ್ಜಲ ಮರುಪೂರಣ (ರಿಚಾರ್ಜ್) ಘಟಕಗಳನ್ನು ನಿರ್ಮಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ಮೀಸಲಾತಿ | ಯಾವ ಕ್ಷೇತ್ರಕ್ಕೆ ಯಾವ ಮೀಸಲು?
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಬತ್ತಿದ ಕೊಳವೆಬಾವಿಗಳಿಗೆ ಜಿಪಿಎಸ್ ಹಾಗೂ ಅಕ್ಷಾಂಶ-ರೇಖಾಂಶ ಆಧಾರದ ಮೇಲೆ ಮರುಪೂರಣ ಘಟಕಗಳನ್ನು ನಿರ್ಮಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಗತಗೊಳಿಸಬೇಕು ಎಂದು ಹೇಳಿದರು.
ಅಂತರ್ಜಲ ಮರುಪೂರಣ ಕಾಮಗಾರಿಗಳ ಗುಣಮಟ್ಟ ಹಾಗೂ ದೀರ್ಘಕಾಲೀನ ಬಾಳಿಕೆಯನ್ನು ಕಾಯ್ದುಕೊಳ್ಳಲು ಅಧಿಕಾರಿಗಳ ತಂಡ ನಿರಂತರ ಸ್ಥಳ ಪರಿಶೀಲನೆ ನಡೆಸಬೇಕು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಹಾಗೂ ಜಿ.ಪಂ ಉಪ ಕಾರ್ಯದರ್ಶಿಗಳು ವಾರದಲ್ಲಿ ಮೂರು ದಿನ ಕಡ್ಡಾಯವಾಗಿ ಕ್ಷೇತ್ರ ಭೇಟಿ ನೀಡಬೇಕು. ಮುಖ್ಯವಾಗಿ ಹಿರಿಯೂರು ಹಾಗೂ ಹೊಳಲ್ಕೆರೆ ತಾಲೂಕುಗಳಲ್ಲಿ ಮರುಪೂರಣ ಘಟಕಗಳ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿ ಹೆಚ್ಚಿನ ಗಮನ ಹರಿಸುವಂತೆ ನಿರ್ದೇಶನ ನೀಡಿದರು.
ಇದನ್ನೂ ಓದಿ: ಎಸ್ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವುದಿಲ್ಲ | ಜಿಲ್ಲಾಧಿಕಾರಿ ಎಸ್.ರಮ್ಯಾ
ಈಗಾಗಲೇ ನಿರ್ಮಿಸಲಾಗಿರುವ ಮರುಪೂರಣ ಘಟಕಗಳಲ್ಲಿ ಮಣ್ಣು ಮತ್ತು ಹೂಳು ಜಮೆಯಾಗಿ ನೀರು ಇಂಗುವುದು ಕಡಿಮೆಯಾಗಿದ್ದರೆ, ಗ್ರಾಮ ಪಂಚಾಯಿತಿಗಳ ಹಂತದಲ್ಲೇ ತಕ್ಷಣ ಮೇಲ್ಭಾಗದ ಹೂಳು ತೆಗೆಸಿ ಸುಸ್ಥಿತಿಯಲ್ಲಿಡಬೇಕು. ಮುಂದಿನ 2 ರಿಂದ 3 ತಿಂಗಳೊಳಗೆ ನಿಗದಿಪಡಿಸಿದ ಗುರಿಯನ್ನು ತಲುಪಿ ಪ್ರಗತಿ ವರದಿ ಸಲ್ಲಿಸಬೇಕು ಎಂದರು.
ತಾಲೂಕು ಮಟ್ಟದಲ್ಲಿ mಸ್ಕ್ಪೋರ್ಸ್ ಸಭೆಗಳನ್ನು ನಡೆಸಿ, ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ವಾಸ್ತವ ಸ್ಥಿತಿ, ಇದುವರೆಗೆ ಆಗಿರುವ ವೆಚ್ಚ, ಬಾಕಿ ಇರುವ ಬಿಲ್ ಪಾವತಿ ಹಾಗೂ ಮುಂಬರುವ ಮೂರು ತಿಂಗಳಿಗೆ ಅಗತ್ಯವಿರುವ ಅನುದಾನದ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಎರಡು-ಮೂರು ದಿನಗಳಲ್ಲಿ ಈ ವರದಿ ಕೈಸೇರಲಿದ್ದು, ಅದರಂತೆ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಕ್ರಮವಹಿಸಲಾಗುವುದು. ಅಗತ್ಯಬಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಸರ್ಕಾರಕ್ಕೆ ವಿಪತ್ತು ಪರಿಹಾರ ನಿಧಿಯಡಿ ಹೆಚ್ಚಿನ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ವಿಬಿರಾಮ್ಜಿ ಯೋಜನೆ-ಅತಿ ಸಣ್ಣ ರೈತರ ಕಲ್ಯಾಣಕ್ಕೆ ಆದ್ಯತೆ ನೀಡಿ: ವಿಬಿರಾಮ್ಜಿ ಯೋಜನೆಯಡಿ ಅತಿ ಸಣ್ಣ ಮತ್ತು ಸಣ್ಣ ರೈತರನ್ನು ತಲುಪಲು ಕೃಷಿ ಹೊಂಡ ಸೇರಿದಂತೆ ವೈಯಕ್ತಿಕ ಸೌಲಭ್ಯ ಕಾಮಗಾರಿಗಳನ್ನು ಚುರುಕುಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ: ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | ಮಠಾಧೀಶರಿಂದ ಪುಷ್ಪವೃಷ್ಠಿ
ಜಿಲ್ಲೆಯಲ್ಲಿ 3 ಲಕ್ಷ ರೈತ ಕುಟುಂಬಗಳಿದ್ದು, ಇವರಲ್ಲಿ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನರೆ. ಒಂದು ಹೆಕ್ಟೇರ್ಗಿಂತ ಕಡಿಮೆ ಜಮೀನು ಹೊಂದಿರುವ ಸುಮಾರು 1 ಲಕ್ಷ ಅತಿ ಸಣ್ಣ ರೈತರನ್ನು ಗುರುತಿಸಿ ಅವರಿಗೆ ಕೃಷಿ ಹೊಂಡ ನಿರ್ಮಿಸಿಕೊಡುವ ಅಭಿಯಾನ ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ಈವರೆಗೆ 22,991 ಕೃಷಿ ಹೊಂಡಗಳನ್ನು ಮಾಡಲಾಗಿದೆ. ಮುಂದಿನ ಒಂದು ತಿಂಗಳಲ್ಲಿ ಕನಿಷ್ಟ 10,000 ಕೃಷಿ ಹೊಂಡಗಳನ್ನು ಹೊಸದಾಗಿ ನಿರ್ಮಿಸುವ ಗುರಿಯನ್ನು ಗ್ರಾಮ ಪಂಚಾಯತಿವಾರು ಹಾಗೂ ತಾಲೂಕುವಾರು ನಿಗದಿಪಡಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಣ್ಣ ನೀರಾವರಿ ಇಲಾಖೆಯ 166 ಕೆರೆಗಳು ಹಾಗೂ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 239 ಕೆರೆಗಳು ಸೇರಿದಂತೆ ಒಟ್ಟು 400ಕ್ಕೂ ಹೆಚ್ಚು ಕೆರೆಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡು, ನರೇಗಾ ಯೋಜನೆಯಡಿ ಹೂಳೆತ್ತುವ ಮತ್ತು ಬಂಡ್ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಎಂದು ತಿಳಿಸಿದರು.
ಇದನ್ನೂ ಓದಿ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಬಾಬು, ಯೋಜನಾ ನಿರ್ದೇಶಕಿ ಜಯಲಕ್ಷ್ಮಮ್ಮ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಅಮರನಾಥ್ ಜೈನ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಸಣ್ಣ ನೀರಾವರಿ ವಿಭಾಗ ಕಾರ್ಯಪಾಲಕ ಇಂಜಿನಿಯರ್ ಕೆ.ಎಂ.ಕೃಷ್ಣ, ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ, ಜಲವಿಜ್ಞಾನಿ ಮತ್ತು ಮಳೆ ನೀರು ಕೊಯ್ಲು ತಜ್ಞ ಡಾ.ದೇವರಾಜರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

