
CHITRADURGA NEWS | 06 AUGUST 2024
ಹೊಸದುರ್ಗ: ಹೊಸದುರ್ಗ ಪಟ್ಟಣದ ಲಾಡ್ಜ್ ಒಂದರಲ್ಲಿ ಖಾಸಗಿ ಬ್ಯಾಂಕ್(ಐಡಿಎಫ್‌ಸಿ) ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗುಂಡ್ಲುಪೇಟೆ ಮೂಲದ ಸಂತೋಷ್(36), ಹೊಸದುರ್ಗ ಪಟ್ಟಣದಲ್ಲಿ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ, ಹೊಳಲ್ಕೆರೆ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ
ಮಧ್ಯಪ್ರದೇಶದಲ್ಲಿ ಐಡಿಎಫ್‌ಸಿ ಬ್ಯಾಂಕಿನಲ್ಲಿ ಉದ್ಯೋಗ ಮಾಡುತ್ತಿದ್ದ ಸಂತೋಷ್, ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತಿದ್ದರು. ಮಧ್ಯ ಪ್ರದೇಶದಿಂದ ವರ್ಗಾವಣೆ ಮಾಡಲು ಕೋರಿದರೆ ಲಂಚದ ಬೇಡಿಕೆ ಇಟ್ಟಿದ್ದರು ಎನ್ನುವುದನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಅಜ್ಜಂಪುರದಲ್ಲಿ ಮದುವೆಯಾಗಿದ್ದ ಸಂತೋಷ್, ಅನಾರೋಗ್ಯದ ಕಾರಣಕ್ಕೆ ಒಂದು ವಾರ ರಜೆ ಮೇಲೆ ಬಂದಿದ್ದರು. ಈ ವೇಳೆ ಹೊಸದುರ್ಗ ಶಾಖೆಯಲ್ಲಿ ಕೆಲಸ ಮಾಡಲು ಆಗಮಿಸಿದ್ದಾಗ ಸೋಮವಾರ ಮಧ್ಯಾಹ್ನ ವಿಶ್ರಾಂತಿಗೆ0ದು ತೆರಳದ್ದಾಗ ಘಟನೆ ನಡೆದಿದೆ.
ಇದನ್ನೂ ಓದಿ: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ
ಮೃತ ಬ್ಯಾಂಕ್ ಉದ್ಯೋಗಿ ಸಂತೋಷ್ ಪತ್ನಿ ಲಾವಣ್ಯ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಹೊಸದುರ್ಗ ಸಿಪಿಐ ತಿಮ್ಮಣ್ಣ ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

