ಕ್ರೈಂ ಸುದ್ದಿ
ಖಾಸಗಿ ಬಸ್ ಮರಕ್ಕೆ ಡಿಕ್ಕಿ 7 ಜನರಿಗೆ ಗಾಯ
CHITRADURGA NEWS | 18 DECEMBER 2024
ಚಿತ್ರದುರ್ಗ: ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಇಂದು ಬೆಳಗ್ಗೆ ಮರಕ್ಕೆ ಡಿಕ್ಕಿಯಾಗಿದ್ದು, 7 ಜನ ಗಾಯಗೊಂಡಿದ್ದಾರೆ.
ಚಳ್ಳಕೆರೆಯಿಂದ ಚಿತ್ರದುರ್ಗದ ಕಡೆಗೆ ಬರುತ್ತಿದ್ದ ಮಹಾದೇವಿ ಬಸ್ ಚಾಲಕನ ನಿಯಂತ್ರಣ ತಪ್ಪಿ ದಂಡಿನಕುರುಬರಹಟ್ಟಿ ಗೇಟ್ ಬಳಿ ಮರಕ್ಕೆ ಡಿಕ್ಕಿಯಾಗಿದೆ.
ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ಖಜಾನೆ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಈ ವೇಳೆ ಬಸ್ಸಿನಲ್ಲಿದ್ದ ಚಿತ್ರದುರ್ಗದ ಕೋಳಿಬುರುಜನಹಟ್ಟಿ ವಾಸಿ ರಮೇಶ್, ಸೈಯರ್ ತಾಹೀರ್, ದಿನೇಶ್, ಇಸ್ಮಾಯಿಲ್, ಫರೀದಾಬಾನು, ಕದುರಮ್ಮ ಮತ್ತಿತರರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.