CHITRADURGA NEWS | 21 August 2026
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ಯೊಂದು ಹೈವೇ ಪಕ್ಕದ ಚರಂಡಿಗೆ ಉರುಳಿದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಕೊನೆಯುಸಿರೆಳೆದಿದ್ದು, 15ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳ ಬದಲಾವಣೆ | ಸೆ.14 ಗಣಪತಿ ಪ್ರತಿಷ್ಠಾಪನೆ, ಅಕ್ಟೋಬರ್ 3 ರಂದು ಶೋಭಾಯಾತ್ರೆ
ಬಸ್ ಚಾಲಕ, ನಿರ್ವಾಹಕ ಹಾಗೂ ಓರ್ವ ನರ್ಸಿಂಗ್ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಗೋವಾ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ದುರಂತ:
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಿಕೆರೆಯಲ್ಲಿರುವ ಯೂನಿವರ್ಸಿಟಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಳೆದ ಆಗಸ್ಟ್ 16 ರಂದು ಗೋವಾ ಪ್ರವಾಸಕ್ಕೆ ತೆರಳಿದ್ದರು.
ಟ್ರಿಪ್ ಮುಗಿಸಿಕೊಂಡು ಖಾಸಗಿ ಬಸ್‌ನಲ್ಲಿ ಗೋವಾದಿಂದ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಚಾಲಕನಿಗೆ ಆವರಿಸಿದ ನಿದ್ರೆಯ ಮಂಪರೇ ಈ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಜಿಲ್ಲಾ ಆಸ್ಪತ್ರೆಗೆ ಗಾಯಾಳುಗಳ ರವಾನೆ:
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ 15ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಕ್ಷಣವೇ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿಗೆ ಹೊಸ ಅಧ್ಯಕ್ಷರ ಆಯ್ಕೆ
ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಂಜಿತ್ ಕುಮಾರ್ ಬಂಡಾರೂ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

