CHITRADURGA NEWS | 26 MARCH 2025
ಚಿತ್ರದುರ್ಗ: ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯ ಸಂಸ್ಕಾರ ಪೂರಕ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
Also Read: ಏಪ್ರಿಲ್ 1 ರಿಂದ 15ರ ವರೆಗೆ ಏಕನಾಥೇಶ್ವರಿ ಜಾತ್ರೆ

ನಗರದ ಡಯಟ್‌ನಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರೊ.ಜಿ.ಪರಮೇಶ್ವರಪ್ಪ ಅವರನ್ನು ಗೌರವಿಸಿ ಮಾತನಾಡಿದರು.
ಸಾಹಿತ್ಯ ಕೃತಿಗಳು ನಮ್ಮಲ್ಲಿ ಧನಾತ್ಮಕ ಚಿಂತನೆ ಬೆಳೆಸುವ ಮೂಲಕ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಪ್ರೇರಣೆ ನೀಡುತ್ತವೆ. ಸರಳತೆ, ಸಾತ್ವಿಕ ಮನೋಭಾವನೆ ಹೊಂದಿರುವ ಪ್ರೊ.ಜಿ.ಪರಮೇಶ್ವರಪ್ಪ ಹೊಳಲ್ಕೆರೆಯಲ್ಲಿ ಮಾರ್ಚ್ 27, 28 ರಂದು ನಡೆಯಲಿರುವ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತೋಷದ ಸಂಗತಿಯಾಗಿದ್ದು ಅವರ ಸಮಾಜಮುಖಿ ಚಿಂತನೆ ಶ್ಲಾಘನೀಯವಾದುದು ಎಂದು ತಿಳಿಸಿದರು.
ಶಾಲೆಗಳಲ್ಲಿ ಶಿಕ್ಷಕರು ಗ್ರಂಥಾಲಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ತರಗತಿವಾರು ಮಕ್ಕಳಿಗೆ ಪುಸ್ತಕಗಳನ್ನು ನೀಡಿ ಓದುವ ಹವ್ಯಾಸವನ್ನು ಬೆಳೆಸುವ ಮೂಲಕ ಅವರಲ್ಲಿ ಸಾಹಿತ್ಯಾಭಿರುಚಿ ಮೂಡಿಸಬೇಕು ಎಂದರು.
Also Read: ಸಾಲ ನೀಡಲು ಲಂಚದ ಬೇಡಿಕೆ | ಡಿಸಿಸಿ ಬ್ಯಾಂಕ್ ನೌಕರ ಲೋಕಾಯುಕ್ತ ಬಲೆಗೆ
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರೊ.ಜಿ.ಪರಮೇಶ್ವರಪ್ಪ ಸನ್ಮಾನ ಸ್ವೀಕರಿಸಿ ಮಾತನಾಡಿ, ಸಾಹಿತ್ಯ ಜನಸಾಮಾನ್ಯರನ್ನು ಎಚ್ಚರಿಸುವಂತಿರಬೇಕು ಬುದ್ದ, ಬಸವಣ್ಣ, ಅಂಬೇಡ್ಕರ್ ಅವರ ಜೀವನಾದರ್ಶಗಳು ನಮ್ಮ ಬದುಕಿಗೆ ಮಾರ್ಗದರ್ಶಕವಾಗಿವೆ.
ಸಾಹಿತ್ಯ ಪರಿಷತ್ತು ಮತ್ತು ಪದಾಧಿಕಾರಿಗಳು ಸಾಮಾಜಿಕ ಕಳಕಳಿಯುಳ್ಳವರಾಗಿ ಸಂಘಟಿತರಾಗಿ ಚರ್ಚಿಸಿ ಸಮಾಜದಲ್ಲಿ ಕಂಡುಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಕಾರ್ಯೋನ್ಮುಖರಾಗಬೇಕು.
ಚಿತ್ರದುರ್ಗ ಜಿಲ್ಲೆ ಬರದ ನಾಡಾಗಿದ್ದು ರೈತರಿಗೆ ಬೆಳೆ ಸರಿಯಾಗಿ ದೊರೆಯುತಿಲ್ಲ. ನೀರಾವರಿ ಯೋಜನೆ ಅಗತ್ಯವಿದ್ದು ಪರಿಣಾಮಕಾರಿಯಾಗಿ ಅನುಷ್ಟಾನವಾಗಬೇಕು ಇದರಿಂದ ರೈತರು ಉತ್ತಮ ಜೀವನ ನಡೆಸಲು ಅನುಕೂಲವಾಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.
Also Read: ಶಿವಮೊಗ್ಗದಲ್ಲಿ ರಾಶಿ ಅಡಿಕೆ ಬೆಲೆ ಮತ್ತಷ್ಟು ಹೆಚ್ಚಳ
ಹಿರಿಯ ಉಪನ್ಯಾಸಕರಾದ ಎಚ್.ಗಿರಿಜ, ಜ್ಞಾನೇಶ್ವರಿ, ಉಪನ್ಯಾಸಕರಾದ ಆರ್.ನಾಗರಾಜು, ಎಸ್.ಬಸವರಾಜು, ಯು.ಸಿದ್ದೇಶಿ, ಸಿ.ಎಸ್.ಲೀಲಾವತಿ, ಶಿವಲೀಲ, ಎಲ್.ರೇವಣ್ಣ, ಪದ್ಮ, ತಾಂತ್ರಿಕ ಸಹಾಯಕ ಅವಿನಾಶ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
