
CHITRADURGA NEWS | 16 DECEMBER 2025
ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಧಾರವಾಡದ ಪ್ರೊ.ಕಾಳಗೌಡ ಬಸಪ್ಪ ಗುಡಸಿ ಅವರಿಂದು ಅಧಿಕಾರ ವಹಿಸಿಕೊಂಡರು.
ಗುಡಸಿ ಅವರಿಗೆ ಈ ಹಿಂದೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಯಾಗಿ ಹಾಗೂ ವಿವಿಧ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 15 ಡಿಸೆಂಬರ್ | ಇಂದಿನ ಮಾರುಕಟ್ಟೆಯ ಅಡಿಕೆ ರೇಟ್ ಇಲ್ಲಿದೆ
ಶ್ರೀ ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ, ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಡಾ.ಪಿ.ಎಸ್. ಶಂಕರ್, ಎಸ್.ಎನ್. ಚಂದ್ರಶೇಖರ್, ಅವರುಗಳು ನೂತನ ಕುಲಪತಿಗಳನ್ನು ಅಭಿನಂದಿಸಿದ್ದಾರೆ.
ಎಸ್.ಜೆ.ಎಂ. ಸಂಸ್ಥೆಯ ಶಾಲಾ-ಕಾಲೇಜುಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
