CHITRADURGA NEWS | 26 MARCH 2026
ಚಿತ್ರದುರ್ಗ: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನಲ್ಲಿ ಪಿಯುಸಿ ಶಿಕ್ಷಣದೊಂದಿಗೆ ನೀಟ್, ಐಐಟಿ-ಜೆಇಇ, ಕೆ-ಸೆಟ್, ಐಸಿಎಆರ್, ಸಿಯುಇಟಿ, ಸಿಎಲ್ಎಟಿ, ಸಿಎ-ಫೌಂಡೇಷನ್ ಪ್ರವೇಶ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ https://gokdom.karnataka.gov.in ಈ ಲಿಂಕ್ ಮೂಲಕ ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಇದನ್ನೂ ಓದಿ: SSLC ಪರೀಕ್ಷೆ | ಇಂಗ್ಲಿಷ್ ವಿಷಯದಲ್ಲಿ 493 ವಿದ್ಯಾರ್ಥಿಗಳು ಗೈರು
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಪದವಿ ಪೂರ್ವ ಕಾಲೇಜು, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

