CHITRADURGA NEWS | 09 SEPTEMBER 2026
ಹೊಳಲ್ಕೆರೆ: ಶಿಕ್ಷಕರು ವೃತ್ತಿನಿಷ್ಠೆಯನ್ನು ಬೆಳೆಸಿಕೊಂಡು, ತಮ್ಮ ವೃತ್ತಿಯನ್ನು ಪ್ರೀತಿಯಿಂದ ನಿರ್ವಹಿಸಿದಾಗ ಉತ್ತಮ ಬೋಧಕರಾಗಲು ಸಾಧ್ಯ ಎಂದು ಚಿತ್ರದುರ್ಗ ಡಯಟ್ನ ಉಪನ್ಯಾಸಕ ಎಸ್. ಬಸವರಾಜು ಹೇಳಿದರು.
ಇದನ್ನೂ ಓದಿ: ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
ಮಲ್ಲಾಡಿಹಳ್ಳಿ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗಾಗಿ ಚಿತ್ರದುರ್ಗ ಡಯಟ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ‘ಗುಣಮಟ್ಟದ ಶಿಕ್ಷಣ ಹಾಗೂ ಶಿಕ್ಷಕರ ವೃತ್ತಿಪರ ಸಾಮರ್ಥ್ಯಾಭಿವೃದ್ಧಿಯಲ್ಲಿ ಡಯಟ್ನ ಪಾತ್ರ’ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಪ್ರಶಿಕ್ಷಣಾರ್ಥಿಗಳು ಶಿಕ್ಷಕ ವೃತ್ತಿಯನ್ನು ಪ್ರೀತಿಯಿಂದ ಸ್ವೀಕರಿಸಬೇಕು. ತರಗತಿ ಕೋಣೆಯಲ್ಲಿ ಕಲಿಕಾಸ್ನೇಹಿ ವಾತಾವರಣ ನಿರ್ಮಿಸಿ, ಪೂರ್ವಸಿದ್ಧತೆಯೊಂದಿಗೆ ಬೋಧನೆ ಮಾಡಿದಾಗ ಬೋಧನೆ ಮತ್ತು ಕಲಿಕಾ ಪ್ರಕ್ರಿಯೆ ಪರಿಣಾಮಕಾರಿಯಾಗುತ್ತದೆ ಎಂದು ತಿಳಿಸಿದರು.
ಡಯಟ್ನಲ್ಲಿ ಜಿಲ್ಲಾ ಸಂಪನ್ಮೂಲ ಘಟಕ, ಸೇವಾಪೂರ್ವ ಮತ್ತು ಸೇವಾನಿರತ ಶಿಕ್ಷಣ, ಯೋಜನೆ ಮತ್ತು ನಿರ್ವಹಣೆ, ಶೈಕ್ಷಣಿಕ ತಂತ್ರಜ್ಞಾನ, ಕಾರ್ಯಾನುಭವ, ಪಠ್ಯಕ್ರಮ ಹಾಗೂ ಮೌಲ್ಯಮಾಪನ ವಿಭಾಗಗಳ ಮೂಲಕ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ನಿರ್ವಹಿಸಲಾಗುತ್ತಿದೆ ಎಂದರು.
ಇದನ್ನೂ ಓದಿ: ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ
ಶಿಕ್ಷಕರ ವೃತ್ತಿಪರ ಸಾಮರ್ಥ್ಯಾಭಿವೃದ್ಧಿಗಾಗಿ ವಿಷಯವಾರು ತರಬೇತಿ, ದ್ವಿಭಾಷಾ ಮಾಧ್ಯಮ ತರಗತಿ ನಿರ್ವಹಣೆ, ಮರುಸಿಂಚನ, ಮೌಲ್ಯ ಶಿಕ್ಷಣ ಹಾಗೂ ಆರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣ (ಇಸಿಸಿಇ) ಸೇರಿದಂತೆ ಹಲವು ತರಬೇತಿಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಪಾತ್ರಾಭಿನಯ, ಜಾನಪದ ನೃತ್ಯ, ವಿಜ್ಞಾನ ನಾಟಕ, ವಸ್ತು ಪ್ರದರ್ಶನ, ವಿಚಾರ ಸಂಕಿರಣ, ಇನ್ಸ್ಫೈರ್ ಅವಾರ್ಡ್, ಎನ್ಎಂಎಎಸ್ ಹಾಗೂ ಮಿಷನ್ ಪ್ರಕೃತಿ ಸೇರಿದಂತೆ ವಿವಿಧ ಸ್ಪರ್ಧಾ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ವಿವರಿಸಿದರು.
ಕಾರ್ಯಾಗಾರದಲ್ಲಿ ಡಯಟ್ನ ಹಿರಿಯ ಉಪನ್ಯಾಸಕ ಎಸ್.ಸಿ. ಪ್ರಸಾದ್, ತಾಂತ್ರಿಕ ಸಹಾಯಕ ಅವಿನಾಶ್, ರಾಘವೇಂದ್ರ ಬಿ.ಇಡಿ ಕಾಲೇಜಿನ ಪ್ರಾಚಾರ್ಯ ಡಾ. ನಾಗರಾಜು, ಉಪನ್ಯಾಸಕರಾದ ಧನಂಜಯ, ರುದ್ರೇಶ್ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
ಚಿತ್ರದುರ್ಗ ಡಯಟ್ಗೆ ಭೇಟಿ ನೀಡಿದ ಮಲ್ಲಾಡಿಹಳ್ಳಿ ರಾಘವೇಂದ್ರ ಬಿ.ಇಡಿ ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ಪಡೆದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

