ಮುಖ್ಯ ಸುದ್ದಿ
ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

CHITRADURGA NEWS | 06 APRIL 2024
ಚಿತ್ರದುರ್ಗ: ಪ್ರಸ್ತುತ ಜಿಲ್ಲೆಯಲ್ಲಿ ಬರದ ತೀವ್ರತೆ ಅಧಿಕವಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಬಹುದು. ಈ ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ಎಲ್ಲಾ ವಿಧದ ಹಸಿರು, ಒಣ ಹಾಗೂ ಸಂಸ್ಕರಿಸಿದ ಮೇವನ್ನು ಜಿಲ್ಲಾ ವ್ಯಾಪ್ತಿಯನ್ನು ಹೊರತುಪಡಿಸಿ ಹೊರ ಜಿಲ್ಲೆಗಳಿಗೆ ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ.
ಇದನ್ನೂ ಓದಿ: ಗೋ ಬ್ಯಾಕ್ ಹೇಳಿಕೆಗೆ ತಿರುಗೇಟು ನೀಡಿದ ಕೆ.ಎಸ್.ನವೀನ್
ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ.
ಈಗಾಗಲೇ ರಾಜ್ಯ ಸರ್ಕಾರ ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡದಂತೆ ನಿಷೇಧಿಸಿ ನವೆಂಬರ್ 2023ರಲ್ಲಿಯೇ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಬಾಡೂಟ ಸೇವನೆ 50ಕ್ಕೂ ಹೆಚ್ಚು ಜನ ಅಸ್ವಸ್ಥ
ಈ ಆದೇಶಗಳನ್ನು ಉಲ್ಲಂಘಿಸಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಯಾವುದೇ ರೂಪದಲ್ಲಿ ಮೇವು ಸಾಗಾಣಿಕೆ ಮಾಡಿದಲ್ಲಿ, ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಮತ್ತು ಕಲಂ 57ರ ಅಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.
