
CHITRADURGA NEWS | 16 JULY 2026
ಚಿತ್ರದುರ್ಗ: 2026ನೇ ಸಾಲಿನ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆ ಇದೇ ಜುಲೈ 17 ರಿಂದ 19 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಉಡುವಳ್ಳಿ ನವೋದಯ ವಿದ್ಯಾಲಯ | ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಪ್ರವೇಶಕ್ಕೆ ಅರ್ಜಿ
ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಯು ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ಬೆಳಿಗ್ಗೆ 10 ರಿಂದ 12 ಹಾಗೂ ಮಧ್ಯಾಹ್ನ 2 ರಿಂದ 4 ರವರೆಗೆ ನಡೆಯಲಿದೆ.
ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್ನೆಟ್ ಕೇಂದ್ರಗಳನ್ನು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಪೋನುಗಳನ್ನು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಆದೇಶ ಹೊರಡಿಸಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

