
CHITRADURGA NEWS | 06 DECEMBER 2025
ಚಿತ್ರದುರ್ಗ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಅಂಗವಾಗಿ ಡಿಸೆಂಬರ್ 7 ರಂದು ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಚಿತ್ರದುರ್ಗ ನಗರದ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ಭಾರತೀಯ ನಾಗರೀಕ ಸುರಕ್ಷ ಸಂಹಿತೆ-2023ರ ಕಲಂ 163ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಈಜುಲು ಹೋಗಿದ ಯುವಕ ಸಾವು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ
ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ, ಸಿ.ಇ.ಟಿ ಕೋಚಿಂಗ್ ಸೆಂಟರ್ ಹಾಗೂ ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಇದೇ ಡಿ.07ರಂದು ಬೆಳಿಗ್ಗೆ 9 ರಿಂದ ಸಂಜೆ 5.30 ರವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಯು ಯಾವುದೇ ಕಾರಣಕ್ಕೂ ವೈರ್‍ಲೆಸ್, ಕ್ಯಾಲುಕಲೇಟರ್, ಲಾಗ್‍ಟೇಬಲ್ಸ್, ಮೊಬೈಲ್ ಫೋನ್‍ಗಳನ್ನು ಮತ್ತಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
