
CHITRADURGA NEWS | 11 JULY 2024
ಚಿತ್ರದುರ್ಗ: ಚಿತ್ರದುರ್ಗ, ಚಳ್ಳಕೆರೆ, ಪಾವಗಡ ಮಧ್ಯದ 120 ಕಿ.ಮೀ. ಉದ್ದದ ರಸ್ತೆಯನ್ನು ರಾಷ್ಟ್ರಿಯ ಹೆದ್ದಾರಿಯಾಗಿ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.
ಇದನ್ನೂ ಓದಿ: ಮುರುಘಾ ಮಠದಲ್ಲಿ ಕಳ್ಳರ ಕೈಚಳಕ | ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ಕಳವು

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರಿಯ ಹೆದ್ದಾರಿ ವಿಭಾಗ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಚಿತ್ರದುರ್ಗ, ಚಳ್ಳಕೆರೆ ಹಾಗೂ ಪಾವಗಡ ನಡುವಿನ ಈ ರಸ್ತೆ ಅಭಿವೃದ್ದಿಯಿಂದ ಆಂದ್ರಪ್ರದೇಶ ಹಾಗೂ ಕರ್ನಾಟಕದ ನಡುವೆ ಸಂಪರ್ಕ ವೃದ್ಧಿಸಲಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ಅನುಮೋದನೆ ಪಡೆಯಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಚಳ್ಳಕೆರೆ ತಾಲ್ಲೂಕಿನ 8000 ಎಕೆರೆ ಪ್ರದೇಶದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ, ರಕ್ಷಣಾ ಮತ್ತು ಅಭಿವೃದ್ಧಿ ಸಂಸ್ಥೆ, ಇಸ್ರೋ, ಬಾರ್ಕ್ ಸೇರಿದಂತೆ ಹಲವು ಸಂಸ್ಥೆಗಳು ನೆಲೆಯೂರಿವೆ. ಚಳ್ಳಕೆರೆ ದೇಶದಲ್ಲೇ ಅತ್ಯಂತ ಪ್ರಮುಖ ನಗರವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಅಭಿವೃದ್ಧಿಯೂ ಮುಖ್ಯ ಎಂದರು.
ಚಳ್ಳಕೆರೆ ನಗರ ವ್ಯಾಪ್ತಿಯ ರಸ್ತೆಗಳು ಸರಿಯಿಲ್ಲ. ಈ ರಸ್ತೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರವು ಅಭಿವೃದ್ಧಿ ಪಡಿಸುತ್ತಿಲ್ಲ. ಆದ್ದರಿಂದ ಚಳ್ಳಕೆರೆ ನಗರ ಪ್ರದೇಶದ 5.7 ಕಿ.ಮೀ. ರಸ್ತೆಯನ್ನು ರೂ.50 ಕೋಟಿ ವೆಚ್ಚದಲ್ಲಿ ಒಂದು ಬಾರಿಗೆ ಅಭಿವೃದ್ಧಿ ಪಡೆಸಲು ಭಾರತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: MUDA CASE: ಸಮಾಜವಾದಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸಚಾ ಎಂದು ಸಾಬೀತು ಮಾಡಲಿ | ಗೋವಿಂದ ಎಂ.ಕಾರಜೋಳ
ಪೊಲೀಸ್ ಬಂದೋಬಸ್ತ್ ಕಾಮಗಾರಿ:
ಚಳ್ಳಕೆರೆ ಹಾಗೂ ಹಿರಿಯೂರು ಮಧ್ಯದ ಹೆದ್ದಾರಿ ಕಾಮಗಾರಿ ಭೂ ಸ್ವಾಧೀನ ಸಮಸ್ಯೆ ಹಾಗೂ ಸ್ಥಳೀಯರ ಸಮಸ್ಯೆಯಿಂದ ವಿಳಂಭ ಆಗಿದೆ. ಸದ್ಯ ಹಿರಿಯೂರು ಸಮೀಪದ 9 ಕಿ.ಮೀ ರಸ್ತೆ ನಿರ್ಮಾಣ ಬಾಕಿದೆ. ವಿನಾ ಕಾರಣ ಯಾರು ಹೆದ್ದಾರಿ ಅಭಿವೃದ್ಧಿಗೆ ಅಡ್ಡಿಗಾಲು ಹಾಕಬಾರದು. ಸೂಕ್ತ ಪೊಲೀಸ್ ಬಂದೋಬಸ್ತ್ನಲ್ಲಿ ಈ ಹೆದ್ದಾರಿ ಕಾಮಗಾರಿಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ವಿಭಾಗ ಹಾಗೂ ಪ್ರಾಧಿಕಾರದ ಅಧಿಕಾರಿಗಳು ಇದ್ದರು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸಮಸ್ಯಾತ್ಮಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
