CHITRADURGA NEWS | 23 JUNE 2025
ಚಿತ್ರದುರ್ಗ: ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂರು ಜನರನ್ನು ಪೊಲೀಸರು ಬಂದಿಸಿದ್ದಾರೆ.
ನಗರದ ಜಲಯಕ್ಷ್ಮೀ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ಶಬೀನಾಭಾನು, ಅನ್ನುಭಾಷಾ ಹಾಗೂ ತಿಪ್ಪೇಸ್ವಾಮಿ ಎಂಬುವವರು ಸೇರಿ ಅಮಾಯಕ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ಗಿರಾಕಿಗಳನ್ನು ಕರೆಯಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೋಟೆ ಠಾಣೆ ಪೊಲೀಸರು ಜೂ.22 ರಂದು ಸಂಜೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಖೈದಿಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ | ದೂರು ದಾಖಲು | ಕಾರಾಗೃಹಕ್ಕೆ ಪೊಲೀಸರ ಭೇಟಿ | ಮೊಬೈಲ್, ಗಾಂಜಾ ಜಪ್ತಿ
ದಾಳಿ ವೇಳೆ ಅನ್ನುಭಾಷಾ ಕಾರು ಹಾಗೂ ಮೂರು ಮೊಬೈಲ್ ಜಪ್ತಿ ಮಾಡಿದ್ದು, ದಂಧೆ ನಡೆಸುತ್ತಿದ್ದ ಮೂರು ಜನರನ್ನು ಬಂಧಿಸಲಾಗಿದೆ. ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಎಎಸ್‌ಪಿ ಕುಮಾರಸ್ವಾಮಿ, ಡಿವೈಎಸ್‌ಪಿಗಳಾದ ದಿನಕರ್, ಉಮೇಶ್ ಈಶ್ವರ ನಾಯ್ಕ್ ಮಾರ್ಗದರ್ಶನದಲ್ಲಿ ಕೋಟೆ ಠಾಣೆ ಪಿಐ ಪ್ರಕಾಶ್ ಗೌಡ ಪಾಟೀಲ್, ಬಿ.ರುಕ್ಕಮ್ಮ ಹಾಗೂ ಸಿಬ್ಬಂದಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.
ಇದನ್ನೂ ಓದಿ: ಬಿರುಸಾದ ಗಾಳಿಗೆ ಮನೆಯ ಮೇಲೆ ಬಿದ್ದ ಟವರ್ | ಕೆಳಗೋಟೆಯಲ್ಲಿ ಘಟನೆ
ಈ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ ಕೋಟೆ ಠಾಣೆ ಪೊಲೀಸರ ತಂಡಕ್ಕೆ ಎಸ್ಪಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
